ಬೆಂಗಳೂರು : ತೀವ್ರ ಪೈಪೋಟಿ ನಡುವೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟ್ ಆಟಗಾರ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಪ್ರಸಾದ್ ಹಾಗೂ ಶಾಂತಕುಮಾರ್ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆ ಅಂತ್ಯಗೊಂಡು ಪರಿಶೀಲನೆ ವೇಳೆ ಬ್ರಿಜೇಶ್ ಬಣದ ಶಾಂತಕುಮಾರ್ ನಾಮಪತ್ರ ತಿರಸ್ಕೃತಗೊಂಡಿದೆ.
ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಕಣಕ್ಕಿಳಿಯುತ್ತಿದ್ದಂತೆ ಹಿರಿಯ ಆಟಗಾರರು ವೆಂಕಟೇಶ್ ಪ್ರಸಾದ್‌ಗೆ ಬೆಂಬಲ ನೀಡಿದ್ದರು. ಮಾಜಿ ಕ್ರಿಕೆಟಿಗ, ಮಾಜಿ ಕೆಎಸ್‌ಸಿಎ ಅಧ್ಯಕ್ಷ ಅನಿಲ್ ಕುಂಬ್ಳೆ, ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಸೇರಿದಂತೆ ಹಲವರು ಬೆಂಬಲ ನೀಡಿದ್ದರು. ಶಾಂತಕುಮಾರ್ ಅವರು 200 ರೂ. ಸಬ್‌ಸ್ಕ್ರಿಪ್ಶನ್ ಫೀಸ್ ಕಟ್ಟಿಲ್ಲದ ಕಾರಣ ಅರ್ಜಿ ತಿರಸ್ಕೃತವಾಗಿದೆ. ಹೀಗಾಗಿ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ ಆಗಿದ್ದಾರೆ. ಹಾಗಾಗಿ ಬ್ರಿಜೇಶ್ ಪಾಟೇಲ್ ಬಣಕ್ಕೆ ತೀವ್ರ ಮುಖಭಂಗವಾಗಿದೆ.








