ದಾವಣಗೆರೆ : ಬಿಜೆಪಿಯ ಬಣ ಬಡಿದಾಟಕ್ಕೆ ಸಂಬಂಧಿಸಿದಂತೆ ನಿನ್ನೆ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ರಾಜ್ಯಕ್ಕೆ ಭೇಟಿ ನೀಡಿ, ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರೇ ಮುಂದುವರೆಯಲಿದ್ದಾರೆ ಎಂದು ಘೋಷಿಸಿದ್ದಾರೆ. ಇದೀಗ ರಾಜ್ಯಾಧ್ಯಕ್ಷ ಸ್ಥಾನ ಪಡೆದಿರುವುದು ಸಿಎಂ ಆಗಲಿಕ್ಕೆ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶಾಸಕ ಯತ್ನಾಳ್ಗೆ ತಿರುಗೇಟು ನೀಡಿದರು.
ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನ ಪಡೆದಿರುವುದು ಸಿಎಂ ಆಗಲಿಕ್ಕೆ ಅಲ್ಲ. ಜವಾಬ್ದಾರಿಯಿಂದ ಆ ಸ್ಥಾನವನ್ನು ನಿರ್ವಹಣೆ ಮಾಡುತ್ತಿದ್ದೇನೆ. ಅವರಿಗೆ ಹೋರಾಟ ಮಾಡಬೇಡಿ ಎಂದು ನಾವು ಯಾವತ್ತಿಗೂ ಹೇಳಿಲ್ಲ ಎಲ್ಲವನ್ನೂ ಪಕ್ಷದ ರಾಷ್ಟ್ರೀಯ ನಾಯಕರು ಗಮನಿಸುತ್ತಿದ್ದಾರೆ. ಅವರ ಅನುಮಾನಗಳಿಗೆ ಆಸೆಗಳಿಗೆ ಕಾಲವೇ ಉತ್ತರಿಸುತ್ತದೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಒಳ್ಳೆಯದಾಗಲಿ ಎಂದರು.
ಅಧಿವೇಶನದಲ್ಲಿ ಸರ್ಕಾರದ ಹಗರಣ ಹೊರೆಗಳಿರುತ್ತೇವೆ. ಅಭಿವೃದ್ಧಿಗಾಗಿ ಸರ್ಕಾರದ ಕಿವಿ ಹಣ್ಣುವ ಕೆಲಸ ಮಾಡುತ್ತೇವೆ. ಯಾವುದೇ ಅಭಿವೃದ್ಧಿ ಇಲ್ಲದೆ ರಾಜ್ಯದ ಜನರು ತತ್ತರಿಸಿದ್ದಾರೆ. ನಾವು ಜನರ ಧ್ವನಿಯಾಗಿ ಅಧಿವೇಶನದಲ್ಲಿ ಎಚ್ಚರಿಸುತ್ತೇವೆ. ಅಧಿವೇಶನದ ನಂತರ ಪ್ರವಾಸ ಮಾಡಿ ಮತ್ತಷ್ಟು ಮಾಹಿತಿ ಕಲೆ ಹಾಕಲಾಗುತ್ತದೆ. ಆನಂತರ ಸಂಸತ್ ಭವನದ ಮುಂದೆ ಧರಣಿ ಮಾಡುತ್ತೇವೆ. ಗ್ಯಾರೆಂಟಿಗೆ ಹಣ ಹೊಂದಿಸಲು ಸರ್ಕಾರ ಪರದಾಡುತ್ತಿದೆ ಎಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.