ಶಿವಮೊಗ್ಗ : ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷರ ಬದಲಾವಣೆ ಕುರಿತು, ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ. ಇದರಲ್ಲಿ ಯಾವುದೇ ರೀತಿಯ ಅನುಮಾನವೇ ಇಲ್ಲ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿಕೆ ನೀಡಿದರು.
ಇಂದು ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿ ವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿದ್ದು ಹೈಕಮಾಂಡ್ ಹಲವು ಹೋರಾಟ ಯಶಸ್ವಿಯಾಗಿ ರೂಪಿಸಿಕೊಂಡು ಬರುತ್ತಿದ್ದಾರೆ ವಿಜಯೇಂದ್ರ ಮಾಸ್ ಲೀಡರ್ ಅವರೊಬ್ಬ ಸಮರ್ಥ ನಾಯಕ ಕಿರಿಯವಯಸ್ಸಿನಲ್ಲಿ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದಾರೆ ವಿಜೇಂದ್ರ ಅವರೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯುತ್ತಾರೆ ಎಂದು ಮಾಜಿ ಶಾಸಕ ರೇಣುಕಾಚಾರ್ಯ ತಿಳಿಸಿದರು.
ಇನ್ನು ರಾಜ್ಯಕ್ಕೆ ರಣದೀಪ ಸಿಂಗ್ ಸುರ್ಜೆವಾಲಾ ಆಗಮಿಸಿರುವ ಕುರಿತು, ಪದೇ ಪದೇ ರಾಜ್ಯಕ್ಕೆ ಬಂದು ಸಭೆ ನಡೆಸುತ್ತಿದ್ದಾರೆ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೋ, ಈ ಕಾಂಗ್ರೆಸ್ ಸರ್ಕಾರ ಪತನ ಅಷ್ಟೇ ಸತ್ಯ. ಪ್ರಜಾತಂತ್ರ ವ್ಯವಸ್ಥೆಯಲ್ಲಿ 5 ವರ್ಷ ಸರ್ಕಾರ ನಡೆಯಬೇಕು. ಆದರೆ ರಾಜ್ಯದಲ್ಲಿ ಈ ಸರ್ಕಾರ ಒಪ್ಪಂದದ ಮೇಲೆ ನಡೆಯುತ್ತಿದೆ. ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಡುವೆ ಫೈಟ್ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಗೊಂದಲಗಳಿವೆ ಎಂದು ತಿಳಿಸಿದರು.