ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡುವ ಸಲುವಾಗಿ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಕೊಪ್ಪಳ ಜಿಲ್ಲಾ ವೆಬ್‌ಸೈಟ್ koppal.nic.in ರಲ್ಲಿ ಪ್ರಕಟಿಸಲಾಗಿದ್ದು, ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯು 2025ರ ಜನವರಿ 2 ಮತ್ತು 3 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ನಡೆಯಲಿದೆ.
ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯ ಆಡಿಟೋರಿಯಂ ಹಾಲ್ ನಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿದ ಸಂಬಂಧಪಟ್ಟ ಮೂಲ ಹಾಗೂ ಒಂದು ಸೆಟ್ ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಲ್ಪಟ್ಟ ದಾಖಲಾತಿಗಳೊಂದಿಗೆ ಪರಿಶೀಲನೆಗೆ ಖುದ್ದಾಗಿ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.