ಬೆಂಗಳೂರು : ರಾಜ್ಯದಲ್ಲಿ ಎಸ್ಸಿ ಎಸ್ಟಿ ಮತ್ತು ಹಿಂದುಳಿದ ವರ್ಗಗಳ ಸರ್ಕಾರಿ ನೌಕರರಿಗೆ ಮುಂಬಡ್ತಿಯಲ್ಲಿ ನಿಯಮ ಪಾಲನೆ ಆಗುತ್ತಿಲ್ಲ ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೆಲವು ಇಲಾಖೆಗಳು ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ. ಖರ್ಗೆ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯ ಸರ್ಕಾರಿ ಎಸ್.ಸಿ. ಎಸ್.ಟಿ. ನೌಕರರ ಸಂಘದವರು ಎಸ್.ಸಿ.ಎಸ್.ಟಿ ನೌಕರರಿಗೆ ಮುಂಬಡ್ತಿಯನ್ನು ನೀಡುವಲ್ಲಿ ರೋಸ್ಟರ್ ಬಿಂದುವನ್ನು ಸರ್ಕಾರದ ಆದೇಶದ ಪ್ರಕಾರ ನಗದಿಪಡಿಸಿದ್ದರೂ, ಅದನ್ನು ಕಟುನಿಟ್ಟಾಗಿ ಪಾಲನೆ ಮಾಡಬೇಕೆಂಬ ನಿರ್ದೇಶನವಿದ್ದರೂ ಕೆಲವು ಇಲಾಖೆಗಳ ಅಧಿಕಾರಿಗಳು ಪಾಲನೆ ಮಾಡದಿರುವ ಬಗ್ಗೆ ಪತ್ರಿಕೆಯಲ್ಲಿ ಬಂದಿರುವ ಕೆಲವು ಪ್ರಮುಖ ಅಂಶಗಳ ಜೊತೆಗೆ ಈ ವಿಚಾರವಾಗಿ ನಿಮಗೂ ಕೂಡ ಬರೆದಿರುವ ಪತ್ರದ ಪ್ರತಿಯನ್ನು ಸಂಘದ ಅಧ್ಯಕ್ಷರು ನನ್ನ ಗಮನಕ್ಕೆ ತಂದಿದ್ದಾರೆ.
ಇದರ ಜೊತೆ ಲಗತ್ತಿಸಿರುವ ಪತ್ರಿಕೆಯಲ್ಲಿ ಬಂದಿರುವ ವಿವರಗಳನ್ನು ಹಾಗೂ ಸಂಘದವರು ನಿಮಗೆ ಈಗಾಗಲೇ ನೀಡಿರುವ ಪತ್ರವನ್ನು ಸ್ವತಃ ಅವಲೋಕಿಸುವುದರ ಜೊತೆಗೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಿ ಸರ್ಕಾರವೇ ಹೊರಡಿಸಿರುವ ಅದೇಶ ಹಾಗೂ ಸುತ್ತೋಲೆಗಳಲ್ಲಿ ತಿಳಿಸಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸ್ಪಷ್ಟ ಆದೇಶವನ್ನು ನೀಡುವುದು ಸೂಕ್ತ ಎಂದು ಪಾತ್ರದಲ್ಲಿ ಉಲ್ಲೆಖಿಸಿದ್ದಾರೆ.