ಮಣಿಪುರ : ಇತ್ತೀಚಿಗೆ ತಾನೇ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಕೊನೆಗೊಂಡು ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು ಇದೀಗ ಮಣಿಪುರ ರಾಜ್ಯದಲ್ಲಿ ಮತ್ತೆ ಹಿಂಸಾಚಾರ ಮುಂದುವರೆದಿದೆ.
ಮಣಿಪುರದ ಉಕ್ರುನ್ ಜಿಲ್ಲೆಯಲ್ಲಿ ಸಶಸ್ತ್ರ ಗುಂಪು ಮನೆಗಳಿಗೆ ಬೆಂಕಿ ಹಚ್ಚಿ ಹಿಂಸಾಚಾರ ನಡೆಸಿದ್ದಾರೆ. ಮನೆಗಳಿಗೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ಐದು ದಿನಗಳ ಕಾಲ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿ ಮಣಿಪುರ ಸರಕಾರ ಆದೇಶ ಹೊರಡಿಸಿದೆ.








