ಬೆಂಗಳೂರು : ವಿಜಯಪುರದ ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಂದು ಸಚಿವ ಎಂ.ಬಿ.ಪಾಟೀಲ್ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.
ಈ ಕುರಿತು ಟ್ವೀಟರ್ ನಲ್ಲಿ ದಾಖಲೆಗಳನ್ನು ಹಂಚಿಕೊಂಡಿರುವ ಅವರು, 2019ರಿಂದ 2022ರವರೆಗೆ ರಾಜ್ಯದಲ್ಲಿ ಆಡಳಿತ ನಡೆಸಿದ ಆಪರೇಷನ್ ಕಮಲದ ಸರ್ಕಾರದ ಅವಧಿಯಲ್ಲಿ ವಕ್ಫ್ ಬೋರ್ಡ್ ವಿಜಯಪುರದ ರೈತರಿಗೆ ನೀಡಿದ ನೋಟೀಸುಗಳಿವು. ಆಗ ಇರದ ಹಿಂದೂ ಪ್ರೇಮ ಈಗ ಕಪೋಲ ಕಲ್ಪಿತ ಸುಳ್ಳುಗಳ ಆಧಾರದ ಮೇಲೆ ಚಿಗುರೊಡೆದಿದ್ದು ಹೇಗೆ? ಎಂದು ಪ್ರಶ್ನಿಸಿದ್ದಾರೆ.
ರಾಜ್ಯದ ಅಭಿವೃದ್ಧಿ ಬಿಟ್ಟು ಹಿಜಾಬ್, ಹಲಾಲ್, ಉರಿ ಗೌಡ, ನಂಜೇಗೌಡ ಎಂದು ಆಡಳಿತ ನಡೆಸಿದ ನಾಟಕ ಮಂಡಳಿಯ ಮುಂದುವರೆದ ಭಾಗ ಈಗ ಪ್ರಸ್ತುತ ನಡೆಯುತ್ತಿರುವ ವಿದ್ಯಮಾನ. ಸುಳ್ಳು ಕಂತೆ ಕಟ್ಟಿ ಜನರ ಕಣ್ಣಿಗೆ ಮಣ್ಣೆರೆಚುವ ಇವರ ಕುತಂತ್ರ ಇಲ್ಲಿ ನಡೆಯುವುದಿಲ್ಲ. ವಿಜಯೇಂದ್ರ ರವರ ಸತ್ಯಶೋಧನಾ ಸಮಿತಿ (ಅತ್ತು-ಗೋಗರೆದು ರಚನೆಗೊಂಡ ಪರಿಷ್ಕೃತ ಸತ್ಯಶೋಧನಾ ಸಮಿತಿ) ಅವರ ಸರ್ಕಾರದ ಅವಧಿಯಲ್ಲಿ ನಮ್ಮ ರೈತರಿಗೆ ಕಳುಹಿಸಿದ ನೋಟೀಸುಗಳಿಗೆ ಉತ್ತರ ಕೊಡಲಿ ಎಂದು ಹೇಳಿದ್ದಾರೆ.
ಬಿಜೆಪಿಗರ ನಕಲಿ ಹಿಂದೂ ಪ್ರೇಮದ ಮೊಸಳೆ ಕಣ್ಣೀರು ಬಟಾ ಬಯಲು!
2019ರಿಂದ 2022ರವರೆಗೆ ರಾಜ್ಯದಲ್ಲಿ ಆಡಳಿತ ನಡೆಸಿದ ಆಪರೇಷನ್ ಕಮಲದ ಸರ್ಕಾರದ ಅವಧಿಯಲ್ಲಿ ವಕ್ಫ್ ಬೋರ್ಡ್ ವಿಜಯಪುರದ ರೈತರಿಗೆ ನೀಡಿದ ನೋಟೀಸುಗಳಿವು!
ಆಗ ಇರದ ಹಿಂದೂ ಪ್ರೇಮ ಈಗ ಕಪೋಲ ಕಲ್ಪಿತ ಸುಳ್ಳುಗಳ ಆಧಾರದ ಮೇಲೆ ಚಿಗುರೊಡೆದಿದ್ದು ಹೇಗೆ?ರಾಜ್ಯದ ಅಭಿವೃದ್ಧಿ ಬಿಟ್ಟು… pic.twitter.com/lPI9qVEaqU
— M B Patil (@MBPatil) October 28, 2024