ಬೆಂಗಳೂರು : ಬಳ್ಳಾರಿಯಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದು ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಶಾಸಕ ಜನಾರ್ಧನ ರೆಡ್ಡಿ ಅವರಿಗೆ ಕರೆ ಮಾಡಿ ಘಟನೆಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹೌದು ಶಾಸಕ ಜನಾರ್ಧನ ರೆಡ್ಡಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಕರೆ ಮಾಡಿದ್ದು ಬಳ್ಳಾರಿಯಲಿ ನಡೆದ ಘರ್ಷಣೆ ಕುರಿತಂತೆ ಇಬ್ಬರು ಮಾತುಕತೆ ನಡೆಸಿದ್ದಾರೆ. ನಿನ್ನೆ ರಾತ್ರಿ ದೂರವಾಣಿ ಕರೆ ಮಾಡಿ ಹೆಚ್ಡಿ ಕುಮಾರಸ್ವಾಮಿ ಜನಾರ್ಧನ ರೆಡ್ಡಿ ಅವರೊಂದಿಗೆ ಮಾತನಾಡಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದು ಚರ್ಚಿಸಿದ್ದಾರೆ. ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಜನಾರ್ದನ ರೆಡ್ಡಿಗೆ ಎಚ್ ಡಿ ಕುಮಾರಸ್ವಾಮಿ ಅಭಯ ನೀಡಿದ್ದಾರೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿ ಹೋರಾಡೋಣ ಅಂತ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.








