ನವದೆಹಲಿ : ನಮ್ಮಲ್ಲಿ ಸಾಕಷ್ಟು ಪೆಟ್ರೋಲ್ ಡೀಸೆಲ್ ಇದೆ. ಸೋಶಿಯಲ್ ಮೀಡಿಯಾದಲ್ಲಿರುವ ಯಾವುದೇ ವದಂತಿಗಳನ್ನು ನಂಬಬೇಡಿ ಆತಂಕ ಬೇಡ ಚಿಲ್ಲರೆ ಮಾರಾಟ ಮಳಿಗೆಗಳಿಗೆ ತೊಂದರೆ ಆಗಿಲ್ಲ ಎಂದುಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ (MOPNG) ಜಂಟಿ ಕಾರ್ಯದರ್ಶಿ ಸುಜಾತ ಶರ್ಮ ಈ ಒಂದು ಹೇಳಿಕೆ ನೀಡಿದ್ದಾರೆ.
ದೇಶಾದ್ಯಂತದ ಇರುವ ಸಂಸ್ಕರಣಾಗಾರಗಳು ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ತಮ್ಮ ಅತ್ಯುನ್ನತ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಹಾಗಾಗಿ ನಮ್ಮಲ್ಲಿ ಸಾಕಷ್ಟು ಪೆಟ್ರೋಲ್ ಡೀಸೆಲ್ ಇದೆ. ಸೋಶಿಯಲ್ ಮೀಡಿಯಾದಲ್ಲಿರುವ ಯಾವುದೇ ವದಂತಿಗಳನ್ನು ನಂಬಬೇಡಿ ಆತಂಕ ಬೇಡ ಚಿಲ್ಲರೆ ಮಾರಾಟ ಮಳಿಗೆಗಳಿಗೆ ತೊಂದರೆ ಆಗಿಲ್ಲ ಎಂದು ತಿಳಿಸಿದರು.
ಈ ಕುರಿತ ಪ್ರಮುಖ ಅಂಶಗಳು ಇಲ್ಲಿವೆ:
-
ಸಂಪೂರ್ಣ ಲಭ್ಯತೆ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದೆ. ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ.
-
ವದಂತಿಗಳಿಗೆ ಬ್ರೇಕ್: ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಇತರ ಮೂಲಗಳ ಮೂಲಕ ಹರಡುವ “ಇಂಧನ ಖಾಲಿಯಾಗುತ್ತಿದೆ” ಎಂಬ ತಪ್ಪು ಮಾಹಿತಿಯನ್ನು ಜನರು ನಂಬಬಾರದು.
-
ಗಾಬರಿ ಬೇಡ: ತೈಲ ಕಂಪನಿಗಳು ನಿರಂತರವಾಗಿ ಪೂರೈಕೆಯನ್ನು ನಿರ್ವಹಿಸುತ್ತಿವೆ, ಆದ್ದರಿಂದ ಸಾರ್ವಜನಿಕರು ಆತಂಕದಿಂದ ಪೆಟ್ರೋಲ್ ಬಂಕ್ಗಳ ಮುಂದೆ ಸಾಲುಗಟ್ಟಿ ನಿಲ್ಲುವ ಅಥವಾ ‘ಪ್ಯಾನಿಕ್ ಬೈಯಿಂಗ್’ ಮಾಡುವ ಅಗತ್ಯವಿಲ್ಲ.








