Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೀದರ್ ನಲ್ಲಿ ಘೋರ ದುರಂತ : ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವು!

BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 100 ದಿನದ ಒಳಗಾಗಿ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ

BREAKING : ಬಳ್ಳಾರಿ ಗಡಿಯಲ್ಲಿ ಲಾರಿ-ಟ್ಯಾಂಕರ್ ಮಧ್ಯ ಭೀಕರ ಅಪಘಾತ : ಚಾಲಕ ಸಜೀವ ದಹನ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 5 ಗ್ಯಾರಂಟಿಗಳ ಜೊತೆಗೆ 242 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ : CM ಸಿದ್ದರಾಮಯ್ಯ
KARNATAKA

BIG NEWS : 5 ಗ್ಯಾರಂಟಿಗಳ ಜೊತೆಗೆ 242 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ : CM ಸಿದ್ದರಾಮಯ್ಯ

By kannadanewsnow57

ಹೊಸಪೇಟೆ : ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 242 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಅಷ್ಟೂ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದ್ದ “ಪ್ರಗತಿಯತ್ತ ಕರ್ನಾಟಕ- ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ. ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ?

ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ.

ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ.

ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ.

15 ನೇ ಹಣಕಾಸು ಆಯೋಗದ ಕಾಲದಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ₹5,300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ.

ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಬಹುಮತ ಗಳಿಸಿ ಆಯ್ಕೆಯೇ ಆಗಿಲ್ಲ.

ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ.

1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ.

2014 ರಲ್ಲಿ ₹28,000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ ₹414 ಇದ್ದದ್ದು ಈಗ ₹850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ವಿರುದ್ಧ ಅಲ್ಲ. ಜನ ನಮ್ಮ ಪರವಾಗಿಯೇ ಇದ್ದಾರೆ.
ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ.

ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ.

BIG NEWS: We have fulfilled 242 promises along with 5 guarantees in two years: CM Siddaramaiah
Share. Facebook Twitter LinkedIn WhatsApp Email

Related Posts

BIG NEWS : ಬೀದರ್ ನಲ್ಲಿ ಘೋರ ದುರಂತ : ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವು!

1 Min Read

BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 100 ದಿನದ ಒಳಗಾಗಿ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ

1 Min Read

BREAKING : ಬಳ್ಳಾರಿ ಗಡಿಯಲ್ಲಿ ಲಾರಿ-ಟ್ಯಾಂಕರ್ ಮಧ್ಯ ಭೀಕರ ಅಪಘಾತ : ಚಾಲಕ ಸಜೀವ ದಹನ!

1 Min Read
Recent News

BIG NEWS : ಬೀದರ್ ನಲ್ಲಿ ಘೋರ ದುರಂತ : ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವು!

BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 100 ದಿನದ ಒಳಗಾಗಿ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ

BREAKING : ಬಳ್ಳಾರಿ ಗಡಿಯಲ್ಲಿ ಲಾರಿ-ಟ್ಯಾಂಕರ್ ಮಧ್ಯ ಭೀಕರ ಅಪಘಾತ : ಚಾಲಕ ಸಜೀವ ದಹನ!

BREAKING : ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಕೂಡ ಔಟ್ | Hardik Pandya

State News
KARNATAKA

BIG NEWS : ಬೀದರ್ ನಲ್ಲಿ ಘೋರ ದುರಂತ : ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವು!

By ಸುರೇಶ್‌ KARNATAKA 1 Min Read

ಬೀದರ್ : ಬೀದರ್ ನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಜನಸೇವಾ…

BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 100 ದಿನದ ಒಳಗಾಗಿ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ

BREAKING : ಬಳ್ಳಾರಿ ಗಡಿಯಲ್ಲಿ ಲಾರಿ-ಟ್ಯಾಂಕರ್ ಮಧ್ಯ ಭೀಕರ ಅಪಘಾತ : ಚಾಲಕ ಸಜೀವ ದಹನ!

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್ : ಮರು ಅರ್ಜಿ ಸ್ವೀಕರಿಸಲು ರಾಜ್ಯ ಸರ್ಕಾರ ಚಿಂತನೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.