ಕೊಪ್ಪಳ : ಉಳಿದ ಅವಧಿಗೂ ಸಿದ್ದರಾಮಯ್ಯನವರೇ ಸಿಎಂ ಆಗಿ ಇರುತ್ತಾರೆ ಅಂದರೆ ಮುಂದಿನ 2 ವರ್ಷ 8 ತಿಂಗಳು ಸಹ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರೇ ಇರಲಿದ್ದಾರೆ ಎಂದು ಕೊಪ್ಪಳದಲ್ಲಿ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಹಾಗೂ ಶಾಸಕರಾದ ಬಸವರಾಜ್ ರೆಡ್ಡಿ ಹೇಳಿಕೆ ನೀಡಿದರು.
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಸಿಎಂ ನೇತೃತ್ವದಲ್ಲಿ ನಾವು ಎಲ್ಲರೂ ಒಗ್ಗಟ್ಟಾಗಿದ್ದೇವೆ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ಇಲ್ಲ. ಹಾಗಾಗಿ ಉಳಿದ ಅವಧಿಗೂ ಸಿದ್ದರಾಮಯ್ಯನವರೇ ಸಿಎಂ ಆಗಿ ಇರುತ್ತಾರೆ ಅಂದರೆ ಮುಂದಿನ 2 ವರ್ಷ 8 ತಿಂಗಳು ಸಹ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರೇ ಇರಲಿದ್ದಾರೆ ಎಂದು ಬಸವರಾಜ್ ರಾಯರೆಡ್ಡಿ ಹೇಳಿಕೆ ನೀಡಿದರು.