ದಕ್ಷಿಣಕನ್ನಡ : ರಾಜ್ಯದಲ್ಲಿ RSS ಚಟುವಟಿಕೆ ನಿಷೇಧ ಕುರಿತಂತೆ, ನಮ್ಮ ಸರ್ಕಾರ ಆರ್‌ಎಸ್‌ಎಸ್ ನಿಷೇಧ ಮಾಡಿಲ್ಲ. ಯಾವುದೇ ಸಂಘ, ಸಂಸ್ಥೆಗಳು ಶಾಲಾ, ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ಜಗದೀಶ್ ಶೆಟ್ಟರ್ ನೇತೃತ್ವದ ಹಿಂದಿನ ಸರ್ಕಾರದಲ್ಲಿ ನಿಷೇಧಿಸಲಾಗಿತ್ತು. ಬಿಜೆಪಿ ಸರ್ಕಾರದ ಆದೇಶ ಮಾಡಿದ್ದನ್ನೇ ನಾವೂ ಪುನರುಚ್ಚರಿಸಿದ್ದೇವೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯ ಪುತ್ತೂರಿನಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ ಯಾವುದೇ ಸಂಘ, ಸಂಸ್ಥೆಗಳ ಕಾರ್ಯಕ್ರಮ, ಚಟುವಟಿಕೆಗಳಿಗೆ ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಸರ್ಕಾರದ ಆದೇಶದಲ್ಲಿ ಆರ್‌ಎಸ್‌ಎಸ್ ಎಂದು ಎಲ್ಲೂ ನಿರ್ದಿಷ್ಟ ಉಲ್ಲೇಖ ಮಾಡಿಲ್ಲ. ಬಿಜೆಪಿಯವರು ಮಾಡಿದ್ದ ಆದೇಶವನ್ನೇ ನಾವೂ ಮಾಡಿದ್ದೇವೆ. ಅವರು ಮಾಡಬಹುದು, ನಾವು ಮಾಡಬಾರದೇ ಎಂದು ಪ್ರಶ್ನಿಸಿದರು.