ಬೆಂಗಳೂರು : ಕರ್ನಾಟಕ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು ಈಗಾಗಲೇ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮತ ಎಣಿಕೆ ನಡೆಯುತ್ತಿದೆ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದು ಆದರೆ ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಒಂದನ್ನು ನೀಡಿದ್ದಾರೆ.
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ದಾವಣಗೆರೆಯಲ್ಲಿ ನಮಗೆ ಸ್ವಲ್ಪ ಹಿನ್ನಡೆ ಆಗಬಹುದು ಮುಸ್ಲಿಂ ಮತಗಳನ್ನು ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ ಈ ಮಾತನ್ನು ಹೇಳಿದ್ದು ನಮ್ಮ ಕಾರಣದಿಂದಲೇ ಸ್ವಲ್ಪ ಹಿನ್ನಡೆ ಆಗಬಹುದು ಅಂತರ ಕಡಿಮೆ ಆದರೂ ಕೂಡ ನಾವು ಅಲ್ಲಿ ಗೆಲ್ಲುತ್ತೇವೆ ಅಂತ ಸಿಎಂ ಸಿದ್ದರಾಮಯ್ಯ ವಿಶ್ವಾಸ ಕೂಡ ವ್ಯಕ್ತಪಡಿಸಿದ್ದಾರೆ.








