ಹುಬ್ಬಳ್ಳಿ : ಮಂಗಳೂರಿನಲ್ಲಿ ಸುಹಾಸ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಗೃಹ ಸಚಿವ ಪರಮೇಶ್ವರ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಕರಾವಳಿ ಕೋಮು ವಿರೋಧಿ ಕಾರ್ಯಪಡೆ ತೀರ್ಮಾನಿಸಲಾಗಿದ್ದು, ಸಮಯ ನೋಡಿಕೊಂಡು ಕೋಮು ವಿರೋಧಿ ಕಾರ್ಯಪಡೆ ರಚನೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಗಳೂರಲ್ಲಿ ಕೋಮು ಹತ್ತಿಕ್ಕಲು ಕ್ರಮ ಕೈಗೊಳ್ಳುತ್ತೇವೆ. ನಾನು ಯಾರ ಬಗ್ಗೆಯೂ ಆರೋಪ ಮಾಡುವುದಿಲ್ಲ. ಕಾನೂನು ಮೀರಿ ಕೆಲಸ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ. ಕೆಲವರಿಗೆ ಬೆದರಿಕೆ ವಿಚಾರದ ಬಗ್ಗೆ ಪರಿಶೀಲನೆ ಮಾಡುತ್ತೇವೆ. ವಿಶೇಷ ಪಡೆಯ ರಚನೆ ಕುರಿತು ಇನ್ನು ನಿರ್ಧಾರ ಮಾಡಿಲ್ಲ. ಟೈಮ್ ನೋಡಿಕೊಂಡು ಕೋಮು ವಿರೋಧಿ ಕಾರ್ಯಪಡೆ ರಚನೆ ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ಪೊಲೀಸರಿಗೆ ಫ್ರೀ ಹ್ಯಾಂಡ್ ನೀಡಬೇಕು ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿ, ವಿ ಸೋಮಣ್ಣ ಅವರು ತಮ್ಮ ಅಭಿಪ್ರಾಯದಲ್ಲಿ ಹೇಳಿದ್ದಾರೆ. ಕಾನೂನು ಸುವ್ಯವಸ್ಥೆಗೆ ಬೇಕಾದಂತಹ ಕ್ರಮ ಕೈಗೊಂಡಿದ್ದೇವೆ. ಸಮಯ ಬಂದಾಗ ಅಂಕಿ ಸಂಖ್ಯೆ ಸಮೇತ ಹೇಳುತ್ತೇವೆ. ಸೋಮಣ್ಣ ಅವರಿಗೆ ಅಂಕಿ ಸಂಖ್ಯೆಯ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.