ಶಿವಮೊಗ್ಗ : ಮೆಟ್ರೋ ಪ್ರಯಾಣದ ದರ ಹೆಚ್ಚಳ ಮಾಡುವ ಬಗ್ಗೆ ಸಮಿತಿ ತೀರ್ಮಾನಿಸುತ್ತದೆ. ಕೇಂದ್ರ ಸರ್ಕಾರದ ಸಮಿತಿ ಮೆಟ್ರೋ ಪ್ರಯಾಣದ ದರ ಹೆಚ್ಚಳ ಮಾಡುವ ಕುರಿತು ತೀರ್ಮಾನ ಕೈಗೊಳ್ಳುತ್ತದೆ ಎಂದು ಶಿವಮೊಗ್ಗದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದರು.
ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ವೇಳೆ ಅಭಿಮಾನಿಗಳು ಡಿಕೆ ಶಿವಕುಮಾರ್ ಪರ ಘೋಷಣೆ ಕೂಗಿದರು. ಈ ವೇಳೆ ಮೆಟ್ರೋ ಪ್ರಯಾಣದ ದರ ಹೆಚ್ಚಳ ಕುರಿತು ಮಾತನಾಡಿದ ಅವರು, ಮೆಟ್ರೋ ಪ್ರಯಾಣ ದರದ ಬಗ್ಗೆ ನಾವು ತೀರ್ಮಾನಿಸಲ್ಲ. BMRCL ಹಾಗೂ ಕೇಂದ್ರ ಸರ್ಕಾರ ತೀರ್ಮಾನಿಸಬೇಕು ಎಂದು ಅವರು ತಿಳಿಸಿದರು.
ಇನ್ನು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಮೃತ ಕುಟುಂಬಸ್ಥರಿಗೆ ಪರಿಹಾರ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ತೀರ್ಮಾನ ಕೈಗೊಳ್ಳುತ್ತಾರೆ ಕುಂಭಮೇಳದಲ್ಲಿ ಅಗ್ನಿ ಅವಘಡದ ಕುರಿತು ನನಗೆ ಮಾಹಿತಿ ಇಲ್ಲ ಎಂದು ಡಿಕೆ ಶಿವಕುಮಾರ್ ತಿಳಿಸಿದರು.