ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಹಂಗಾಮದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿಯಾಗಿದ್ದಾರೆ.ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಮಲ್ಲಿಕಾರ್ಜುನ್ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಸುಮಾರು 45ಕ್ಕೂ ಹೆಚ್ಚು ನಿಮಿಷಗಳ ಕಾಲ ಸಿಎಂ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ಮಾತುಕತೆ ನಡೆಸಿದ್ದಾರೆ. ಹನಿ ಟ್ರಾಪ್ ಬಗ್ಗೆ ಉಭಯ ನಾಯಕರು ಸಮಾಲೋಚನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ಎಂ ಸಿದ್ದರಾಮಯ್ಯ ಅವರು ನನ್ನ ನಿವಾಸಕ್ಕೆ ಬರುತ್ತೇನೆ ಅಂತ ಹೇಳಿದ್ದರು.
ಅವರಿಗೆ ನಡೆಯಲು ಆಗದಿದ್ದಕ್ಕೆ ನಾನೇ ಅವರನ್ನು ಭೇಟಿಯಾದೆ ಸಿಎಂ ಸಿದ್ದರಾಮಯ್ಯ ಅವರನ್ನು ಸೌಜನ್ಯಯುತ ಭೇಟಿ ಮಾಡಿದ್ದೇನೆ. ಸಿಎಂ ಸಿದ್ದರಾಮಯ್ಯ ಯೋಗ ಕ್ಷೇಮ ಕೇಳೋದು ನಮ್ಮ ಕರ್ತವ್ಯ. ಆದಷ್ಟು ಇಂದ ಭೇಟಿ ಮಾಡಿದ್ದೇನೆ ಎಂದು ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.