ನವದೆಹಲಿ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (muda) ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮತ್ತೆ 100 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಇದೇ ವಿಚಾರವಾಗಿ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಡಿ ಅವರು ಆಸ್ತಿ ಮುಟ್ಟುಗೊಲು ಹಾಕಿಕೊಳ್ಳಲಿ. ಆಸ್ತಿ ಮುಟ್ಟುಗೋಲು ಹಾಕಿಕೊಂಡರೆ ತೊಂದರೆ ಇಲ್ಲ. ಸೈಟ್ ಗಳನ್ನು ಬೇರೆಯವರಿಗೆ ಕೊಟ್ಟಿದ್ದರ ಕುರಿತು ಕ್ರಮ ಕೈಗೊಂಡಿದ್ದಾರೆ ತೆಗೆದುಕೊಳ್ಳಲಿ ಎಂದು ಸಿದ್ದರಾಮಯ್ಯ ತಿಳಿಸಿದರು.
ಮುಡಾ ಪ್ರಕರಣದಲ್ಲಿ ಇಲ್ಲಿಯವರೆಗೆ 400 ಕೋಟಿ ರೂ. ಸಂಚಿತ ಮುಟ್ಟುಗೋಲು ಹಾಕಿಕೊಂಡಿರುವ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಿಎಂಎಲ್ಎ, 2002 ರ ನಿಬಂಧನೆಗಳ ಅಡಿಯಲ್ಲಿ, ಬೆಂಗಳೂರಿನ ಇಡಿ, 9/06/2025 ರಂದು ರೂ. 100 ಕೋಟಿ (ಅಂದಾಜು) ಮಾರುಕಟ್ಟೆ ಮೌಲ್ಯದ 92 ಸ್ಥಿರ ಆಸ್ತಿಗಳನ್ನು (ಮುಡಾ ಸೈಟ್ಗಳು) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ತಿಳಿಸಿದೆ.