ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಸೇವಾವಧಿಯಲ್ಲಿ ಶಿಸ್ತು ಉಲ್ಲಂಘಿಸಿದರೆ ಅಥವಾ ಕರ್ತವ್ಯ ಲೋಪ ಎಸಗಿದರೆ ಅವರಿಗೆ ಎಂತಹ ದಂಡನೆಗಳನ್ನು ವಿಧಿಸಬಹುದು ಎಂಬ ಬಗ್ಗೆ ಹಲವರಿಗೆ ಸ್ಪಷ್ಟ ಮಾಹಿತಿಯಿಲ್ಲ. ಈ ಹಿನ್ನೆಲೆಯಲ್ಲಿ, ಸಾಬೀತಾದ ಆರೋಪಗಳ ತೀವ್ರತೆಗೆ ಅನುಗುಣವಾಗಿ ವಿಧಿಸಬಹುದಾದ ದಂಡನೆಗಳ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಈ ಹಿಂದೆಯೇ ಮಾರ್ಗಸೂಚಿಗಳನ್ನು ನೀಡಿದೆ.
ಕರ್ನಾಟಕ ಸಿವಿಲ್ ಸೇವಾ ನಿಯಮಾವಳಿಗಳ ಅಡಿಯಲ್ಲಿ, ಶಿಸ್ತು ಪ್ರಾಧಿಕಾರಗಳು ಏಕರೂಪದ ದಂಡನೆ ವಿಧಿಸಲು ಅನುಕೂಲವಾಗುವಂತೆ ಸರ್ಕಾರವು ಕೆಲವು ಪ್ರಮುಖ ಉದಾಹರಣೆಗಳನ್ನು ಪಟ್ಟಿ ಮಾಡಿದೆ. ಅದರ ವಿವರ ಇಲ್ಲಿದೆ.









