ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ ಅವರು ಮಧ್ಯಂತರ ಜಾಮೀನು ಮೇಲೆ ಹೊರಗಡೆ ಇದ್ದಾರೆ. ಬೆನ್ನು ನೋವಿನ ಸಮಸ್ಯೆ ಕಾರಣ ತಿಳಿಸಿ ಹೈ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜೈಲಿನಿಂದ ಬಿಡುಗಡೆ ಆದ ಕೂಡಲೇ ಒಂದು ವಾರದ ಒಳಗೆ ನಟ ದರ್ಶನ್ ಅವರ ಆರೋಗ್ಯದ ವೈದ್ಯಕೀಯ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡುವ ಸಂದರ್ಭದಲ್ಲಿ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಪರ ವಕೀಲರು ಹೈಕೋರ್ಟಿಗೆ ಅವರ ಆರೋಗ್ಯದ ವೈದ್ಯಕೀಯ ವರದಿ ಸಲ್ಲಿಸಿದ್ದಾರೆ.
ಹೈ ಕೋರ್ಟ್ ಗೆ ಸಲ್ಲಿಸಿರುವ ವರದಿಯಲ್ಲಿ ಸರ್ಜರಿಗೆ ನಟ ದರ್ಶನ್ ಅವರು ಇನ್ನು ಒಪ್ಪಿಗೆ ಸೂಚಿಸಿಲ್ಲ. ಅತ್ಯಗತ್ಯವಾಗಿದ್ದರೆ ಮಾತ್ರ ಅವರಿಗೆ ಸರ್ಜರಿ ಮಾಡಲಾಗುತ್ತದೆ ಎಂದು ಹೈ ಕೋರ್ಟ್ ಗೆ ಸಲ್ಲಿಸಿರುವ ವರದಿ ಕುರಿತು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಹಾಗಾಗಿ ನಟ ದರ್ಶನ್ ಗೆ ಇನ್ನು ಫಿಸಿಯೋಥೆರಪಿ ಮಾಡಬೇಕಾ ಅಥವಾ ಸರ್ಜರಿ ಮಾಡಬೇಕಾ ಎನ್ನುವುದನ್ನು ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿಲ್ಲ.