ಮಂಡ್ಯ : ಡಿಸಿಎಂ ಡಿಕೆ ಶಿವಕುಮಾರ್ ಆರ್ ಎಸ್ ಎಸ್ ಗೀತೆ ಹಾಡಿದ ವಿಚಾರವಾಗಿ ಮಂಡ್ಯದಲ್ಲಿ ಸಚಿವ ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಬ್ಬ ಹಿಂದು. ಹಿಂದುತ್ವ ದೇಗುಲಗಳ ಬಗ್ಗೆ ಬಿಜೆಪಿಗಿಂತ ನಮಗೆ ಹೆಚ್ಚು ಗೌರವವಿದೆ. ನಾವು ಎಲ್ಲರನ್ನೂ ಸಮಾನವಾಗಿ ನೋಡುತ್ತೇವೆ. ಡಿಸಿಎಂ ಡಿಕೆ ಶಿವಕುಮಾರ್ ಸಂದರ್ಭ ಬಂದಾಗ ಸಿಎಂ ಆಗುತ್ತಾರೆ ಎಂದು ಸಚಿವ ಚೆಲುವರಾಯ ಸ್ವಾಮಿ ತಿಳಿಸಿದರು.
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಿಂದುತ್ವದಲ್ಲಿ ರಾಜಕಾರಣ ಮಾಡುತ್ತಾರೆ. ನಾವು ಧರ್ಮ ಸಮುದಾಯ ಇಟ್ಟುಕೊಂಡು ರಾಜಕಾರಣ ಮಾಡಲ್ಲ. ಡಿಕೆ ಶಿವಕುಮಾರ್ ಬಿಜೆಪಿಗೆ ಹೋಗುವುದಾದರೆ ಯಾವಾಗಲೂ ಹೋಗುತ್ತಿದ್ದರು ಕಾಂಗ್ರೆಸ್ ನಲ್ಲಿ ಡಿಕೆ ಶಿವಕುಮಾರ್ ದಟ್ಟಿ ನೆಲ ಕಂಡುಕೊಂಡಿದ್ದಾರೆ ಡಿಕೆ ಶಿವಕುಮಾರ್ ಹಾಗೆ ಬಿಜೆಪಿಗೆ ಹೋಗುತ್ತಾರೆ ಕಾಂಗ್ರೆಸ್ ಅಧ್ಯಕ್ಷರಾಗಿ ಉತ್ತಮವಾಗಿ ಡಿಕೆ ಶಿವಕುಮಾರ್ ಕೆಲಸ ಮಾಡಿದ್ದಾರೆ ಎಂದು ಮಂಡ್ಯದಲ್ಲಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆ ನೀಡಿದರು.
ನಮಗೆ ಡಿಕೆ ಶಿವಕುಮಾರ್ ಅವರ ಬಗ್ಗೆ ಪ್ರಶಂಸೆ ಇದೆ ಎಂದರು. ಹಾಗಿದ್ರೆ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರಾ ಎಂಬ ಮಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸಂದರ್ಭ ಬಂದಾಗ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಆಗುತ್ತಾರೆ ಎಂದು ಮಂಡ್ಯದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆ ನೀಡಿದರು.