ಮೈಸೂರು : ರಾಜ್ಯದಲ್ಲಿ ಅತ್ಯಾಚಾರ ಕೊಲೆ ಪ್ರಕರಣಗಳ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ಎಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ನಡೆಯುತ್ತಿವೆ? ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮರು ಪ್ರಶ್ನಿಸಿದ್ದಾರೆ.
ಮೈಸೂರಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಹೆಚ್ಚುತ್ತಿರುವ ವಿಚಾರವಾಗಿ ರಾಜ್ಯದಲ್ಲಿ ಎಲ್ಲಿ ರೇಪ್ & ಕೊಲೆ ಹಲವಾರು ಪ್ರಕರಣಗಳು ಆಗುತ್ತಿವೆ? ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದ್ದ ಕೊಲೆ ಪ್ರಕರಣಗಳಿಗಿಂತಲೂ ನಮ್ಮ ಸರ್ಕಾರ ಬಂದ ಮೇಲೆ ಕಡಿಮೆಯಾಗಿದೆ. ರೇಪ್ ಮತ್ತು ಕೊಲೆ ಪ್ರಕರಣದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.