ಬೆಂಗಳೂರು : ರೌಡಿಶೀಟರ್ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿಯವರು ಆರೋಪಿಸಿದ ವಿಚಾರವಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿ ಹದಗೆಟ್ಟಿದೆ? ದೇಶದಲ್ಲಿ ಏನಾಗಿದೆ ಎಂಬುದನ್ನು ಬಿಜೆಪಿಗರು ಮೊದಲು ಹೇಳಬೇಕು ಎಂದು ಪ್ರಶ್ನಿಸಿದರು.
ಬಿಜೆಪಿಯವರ ಅವಧಿಯಲ್ಲಿ ಎಲ್ಲವನ್ನು ಮಾಡಿದ್ದಾರೆ. ಈಗ ನಮಗೆ ಮೂತಿ ಒರೆಸುವುದಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಮಂಗಳೂರಿನ ಘಟನೆಯ ಬಗ್ಗೆ ಪೊಲೀಸರು ತನಿಖೆ ಮಾಡುತ್ತಾರೆ. ಸುಹಾಸ್ ಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವರು ಉತ್ತರ ಕೊಡುತ್ತಾರೆ. ಬಿವೈ ವಿಜಯೇಂದ್ರ ರಾಜಕೀಯ ಬಿಟ್ಟು ಇನ್ನೇನು ಮಾಡುತ್ತಾರೆ? ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪದ ವಿಚಾರವಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿ ಹದಗೆಟ್ಟಿದೆ? ದೇಶದಲ್ಲಿ ಏನಾಗಿದೆ ಎಂಬುದನ್ನು ಬಿಜೆಪಿಗರು ಮೊದಲು ಹೇಳಬೇಕು ಎಂದು ಆನೇಕಲ್ ನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು.