ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ.ಯುಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಸಂಬಂಧಿಸಿದಂತೆ ನಟ ಪ್ರಕಾಶ್ ಕಿಡಿಕಾರಿದ್ದಾರೆ.
ಹೌದು, ಘಟನೆ ಕುರಿತು ಪ್ರಕಾಶ್ ರಾಜ್ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸೌಜನ್ಯ ಪರ ದನಿ ಎತ್ತಿದ ನಿಷ್ಠಾವಂತ ಪತ್ರಕರ್ತರ ಮೇಲೆ ಹಲ್ಲೆ ನಡೆದಿದ್ದನ್ನು ಖಂಡಿಸಿದ್ದಾರೆ.
ಇಂಥ ಗೂಂಡಾಗಳಿಂದಲೇ ಲಕ್ಷಾಂತರ ಜನರು ಪೂಜಿಸುವ ಧರ್ಮಸ್ಥಳಕ್ಕೆ ಕೆಟ್ಟ ಹೆಸರು ಹಾಗೂ ಕಳಂಕ ಎಂದಿರುವ ಪ್ರಕಾಶ್ ರಾಜ್ ಸೌಜನ್ಯಗೆ ನ್ಯಾಯ ಕೇಳಿದರೆ ಇವರಿಗೇನು ಕಷ್ಟ? ಇವರ ಹಿಂದೆ ಯಾರಿದ್ದಾರೆ? ಇವರನ್ನು ಕಳುಹಿಸಿ ಹೊಡೆಸುತ್ತಿರುವವರು ಯಾರು ಎಂಬ ಅನುಮಾನ ಹೆಚ್ಚಾಗುತ್ತಿದೆ. ಪೊಲೀಸರು ಈ ಗೂಂಡಾಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಸ್ಥಿಪಂಜರ ಶೋಧದ ನಡುವೆ ಧರ್ಮಸ್ಥಳ ಉದ್ವಿಗ್ನವಾಗಿದೆ. ಮೂವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಲಾಗಿದೆ. ಅವರ ಕ್ಯಾಮರಾಗಳನ್ನು ಹಾಳು ಮಾಡಲಾಗಿದೆ. ನೇತ್ರಾವತಿಯ ಪಾಂಗಳ ಎಂಬಲ್ಲಿ ಹಲ್ಲೆ ನಡೆಸಲಾಗಿದ್ದು, ಉದ್ವಿಗ್ನ ಸ್ಥಿತಿ ಉಂಟಾಗಿದೆ. ತಡರಾತ್ರಿ ಪೊಲೀಸ್ ಠಾಣೆಯ ಎದುರು ಪರ-ವಿರೋಧದವರು ಪ್ರತಿಭಟನೆ ನಡೆಸಿದ್ದಾರೆ. ಕುಡ್ಲ ರ್ಯಾಂಪೇಜ್ ನ ಅಜಯ್ ಅಂಚನ್, ಯುನೈಟಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲಾ ರ್ಯಾಂಪೇಜಿನ ಕ್ಯಾಮೆರಾ ಮೆನ್ ಮೇಲೆ ಬುಧವಾರ ಸಂಜೆ ಹಲ್ಲೆ ನಡೆಸಲಾಗಿದೆ.
ಧರ್ಮಸ್ಥಳದಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ಮಾಧ್ಯಮ ಮಿತ್ರರ ಮೇಲಿನ ಹಲ್ಲೆ ಖಂಡನಾರ್ಹ.. ಇಂತಹ ಗೂಂಡಾಗಳಿದಲೇ ಭಕ್ತಾದಿಗಳು ನಂಬುವ ಧರ್ಮಸ್ಥಳಕ್ಕೆ ಕಳಂಕ ಬಂದಿರುವುದು.. ಸೌಜನ್ಯಾಳ ದಾರುಣ ಹತ್ಯೆಗೆ ನ್ಯಾಯ ಕೇಳಿದರೆ ಇವರಿಗೇಕೆ ಕೋಪ.. ದಯವಿಟ್ಟು ಬಂಧಿಸಿ ಸತ್ಯ ಹೊರತನ್ನಿ #justasking #DharmasthalaHorror #justiceforsoujanya pic.twitter.com/LwOxL3UZkG
— Prakash Raj (@prakashraaj) August 6, 2025