ಬೆಂಗಳೂರು : ರಾಜ್ಯ ಕಾಂಗ್ರೆಸ್ ಆಡಳಿತದಲ್ಲಿ ಇದೀಗ ನಾಯಕತ್ವ ಪಟ್ಟಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನಡುವೆ ಬಹುದೊಡ್ಡ ಜಟಾಪಟಿ ನಡೆಯುತ್ತಿದ್ದು ಒಂದು ಕಡೆ ನಾನೇ ಐದು ವರ್ಷ ಸಿಎಂ ಆಗಿರುತ್ತೇನೆ, ಬಜೆಟ್ ಸಹ ನಾನೇ ಮಾಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದರೆ, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿತ ಕೆಲವು ಸಚಿವರು ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ಅವರನ್ನು ಭೇಟಿಯಾಗಿದ್ದಾರೆ.
ಇದರ ಮಧ್ಯ ನೆನ್ನೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜೆಡಿಎಸ್ ಎಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ಕೊಟ್ಟಿದ್ದಾರೆ. ಏಕೆಂದರೆ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರಣಿ ಹಾಗೂ ಅಕ್ರಮ ಬೆಟ್ಟಿಂಗ್ ದಂಧೆ ಪ್ರಕರಣದಲ್ಲಿ ಶಾಸಕ ವೀರೇಂದ್ರ ಪಪ್ಪಿ ಪರಪ್ಪನ ಅಗ್ರಹಾರ ಜೈಲಲ್ಲಿ ಇದ್ದಾರೆ. ಅವರನ್ನು ಭೇಟಿಯಾಗಿ ನಮಗೆ ಬೆಂಬಲ ನೀಡುವಂತೆ ಶಾಸಕರ ಸಹಿ ಸಂಗ್ರಹ ಮಾಡುವುದಕ್ಕೆ ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ಕೊಟ್ಟಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.








