ನವದೆಹಲಿ : ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುಟುಂಬದ ಜೊತೆಗೆ ವಿದೇಶಕ್ಕೆ ತೆರಳಿದ್ದರು.ಇದೆ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಔತಣಕೂಟ ಏರ್ಪಡಿಸಿಲಾಗಿತ್ತು. ಸೇರಿದಂತೆ 35 ಶಾಸಕರು ಹಲವು ಸಚಿವ ಭಾಗಿಯಾಗಿದ್ದರು. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟಕ್ಕೆ ಸೇರಿದರೆ ಅದಕ್ಕೆ ರಾಜಕೀಯ ಏಕೆ ಬೇರೆಸುತ್ತಿರಿ ಎಂದು ಸಿಡಿಮಿಡಿಗೊಂಡಿದ್ದಾರೆ.
ಇಂದು ವಿದೇಶ ಪ್ರವಾಸ ಮಾಡಿಸಿಕೊಂಡು ಭಾರತಕ್ಕೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್ ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕು ವರ್ಷದಿಂದ ಎಲ್ಲೂ ಹೊರಗೆ ಹೋಗಿರಲಿಲ್ಲ. ಹೀಗಾಗಿ ಕುಟುಂಬದ ಜೊತೆಗೆ ಹೊಸ ವರ್ಷಕ್ಕೆ ವಿದೇಶಕ್ಕೆ ತೆರಳಿದ್ದೆ. ಔತಣಕೂಟಕ್ಕೆ ಸೇರಿದ್ದನ್ನೂ ರಾಜಕೀಯ ಯಾಕೆ ಬೆರೆಸುತ್ತೀರಿ. ಎಲ್ಲರೂ ಊಟಕ್ಕೆ ಸೇರಿದರೆ ತಪ್ಪೇನು? ನಾನು ಕೆಲವು ಬಾರಿ ಊಟಕ್ಕೆ ಕರೆದಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಕ್ಯಾಬಿನೆಟ್ ಪುನರ್ ರಚನೆ ನಿಮ್ಮನ್ನು ಬ್ಯುಸಿಯಲ್ಲಿಡಲು ದಾರಿ ತಪ್ಪಿಸುತ್ತಿದ್ದಾರೆ ಎಂದರು.
ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಔತಣಕೂಟ ಏರ್ಪಡಿಸಲಾಗಿತ್ತು. ಈ ಒಂದು ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್ ಎಚ್ ಸಿ ಮಹದೇವಪ್ಪ ಕೆ.ಎನ್ ರಾಜಣ್ಣ ಸೇರಿದಂತೆ 7 ಸಚಿವರು ಹಾಗೂ 35 ಶಾಸಕರು ಭಾಗಿಯಾಗಿದ್ದರು. ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿತ್ತು