ಬೆಂಗಳೂರು : ಗ್ಯಾರಂಟಿ ಯೋಜನೆಗಳಲ್ಲಿ ಯಾವುದಾದರು ಎರಡು ಯೋಜನೆಗಳನ್ನು ನಿಲ್ಲಿಸಿದರೆ ಅಭಿವೃದ್ಧಿಗಾಗಿ ಅನುದಾನಕ್ಕಾಗಿ ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಶಾಸಕ ಕವಿಯಪ್ಪ ಹೇಳಿಕೆ ನೀಡಿದ್ದಾರೆ ಈ ಒಂದು ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಶಾಸಕ ಗವಿಯಪ್ಪ ಗೆ ಶೋಕಾಸ್ ನೋಟಿಸ್ ನೀಡುತ್ತೇನೆ. ಕಾಂಗ್ರೆಸ್ಸಿನ ಯಾವುದೇ ಶಾಸಕರು ಗ್ಯಾರೆಂಟಿ ಯೋಜನೆ ಕುರಿತು ಮಾತನಾಡಬಾರದು ಎಂದು ತಾಕೀತು ಮಾಡಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಕುರಿತಂತೆ ಅಪಸ್ವರ ಎತ್ತಿರುವ ಕಾಂಗ್ರೆಸ್ ಶಾಸಕ ಗವಿಯಪ್ಪಗೆ ಶೋಕಾಸ್ ನೋಟಿಸ್ ಕೊಡುತ್ತೇನೆ. ಕಾಂಗ್ರೆಸ್ಸಿನ ಯಾವ ಶಾಸಕರು ಗ್ಯಾರಂಟಿ ಯೋಜನೆ ಕುರಿತು ಮಾತನಾಡಬಾರದು. ಅದೆಷ್ಟೇ ಖರ್ಚಾಗಲಿ ಗ್ಯಾರಂಟಿ ಯೋಜನೆಗಳನ್ನು ನಾವು ಜನರಿಗಾಗಿ ಜಾರಿಗೊಳಿಸಿದ್ದೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.