ತುಮಕೂರು : ಸದ್ಯ ರಾಜ್ಯದಲ್ಲಿ ಹನಿಟ್ರ್ಯಾಪ್ ಎನ್ನುವ ವಿಚಾರ ಭಾರಿ ಸದ್ದು ಮಾಡುತ್ತಿದ್ದು, ಸಹಕಾರ ಸಚಿವ ಕೆ.ಎನ್ ರಾಜಣ್ಣ ವಿರುದ್ಧ ಎರಡರಿಂದ ಮೂರು ಬಾರಿ ಹನಿ ಟ್ರ್ಯಾಪ್ ಪ್ರಯತ್ನ ನಡೆದಿದೆ ಎನ್ನುವ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.
ಇನ್ನು ಇದೇ ವಿಚಾರವಾಗಿ ಅವಶ್ಯಕತೆ ಬಿದ್ದರೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗುತ್ತೇನೆ. ಹನಿಟ್ರ್ಯಾಪ್ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿಲ್ಲ, ಅವಶ್ಯಕತೆ ಬಿದ್ದರೆ ಭೇಟಿಯಾಗುವುದಾಗಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಮುಖ್ಯಮಂತ್ರಿಯನ್ನು ಭೇಟಿ ಮಾಡಬಹುದು. ಗೃಹ ಸಚಿವರನ್ನು ಭೇಟಿ ಮಾಡಿ ಲಿಖಿತ ರೂಪದಲ್ಲಿ ದೂರು ಕೊಡುವುದಾಗಿ ತಿಳಿಸಿದರು. ಸದನದಲ್ಲಿ ನಾನೊಂದು ಹೇಳಿಕೆ ಮಾಡಿದ್ದೇನೆ. ಅದಕ್ಕೆ ಬದ್ಧ ಇದ್ದೇನೆ. ಏನೇನು ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿದೆ ಅದಕ್ಕೆ ಗೃಹ ಮಂತ್ರಿಗಳನ್ನ ಭೇಟಿ ಮಾಡಿ ಲಿಖಿತ ರೂಪದಲ್ಲಿ ದೂರು ಕೊಡುತ್ತೇನೆ ಎಂದರು.
ಗೃಹ ಸಚಿವರು ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ಮಾಡಿ ತನಿಖೆ ಮಾಡಿದರೆ ಸೂಕ್ತ. ಇದರಲ್ಲಿ ಇವರು, ಅವರು ಸೇರಿದ್ದಾರೆ ಅಂತ ನಿರ್ದಿಷ್ಟವಾಗಿ ಹೇಳಲು ಬರುವುದಿಲ್ಲ. ಯಾರಿದ್ದಾರೆ ಅಂತ ಸತ್ಯ ಹೊರಗೆ ಬರಬೇಕು ಹೈಕಮಾಂಡ್ ಗೆ ಯಾಕೆ ದೂರು ಕೊಡಬೇಕು ಅಂದರೆ ಯಾರಾದರೂ ಹೈಕಮಾಂಡ್ ಗೆ ಸಿಡಿ ತೆಗೆದುಕೊಂಡು ಹೋಗಿ ಕೊಟ್ಟರೆ, ರಾಜಣ್ಣ ಮೊದಲೇ ಹೇಳಿದ್ದರು ಅಂತ ಗೊತ್ತಿರಬೇಕಲ್ಲ. ನಾನು ಯಾವ ರೀತಿ ಲೋಪ ಎಸಗಿಲ್ಲ. ನನ್ನ ಮೇಲೆ ಯಾವುದಾದರೂ ಲೋಪ ಇದೆ ಅಂದರೆ ನಂಬಬಾರದು ಎಂದರು.