ಬೆಂಗಳೂರು : ಸಣ್ಣ ನೀರಾವರಿ ಸಚಿವ ಎನ್ಎಸ್ ಬೋಸರಾಜು ಅವರ ವಿರುದ್ಧ ಗುತ್ತಿಗೆದಾರರಿಂದ ಕಮಿಷನ್ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ವಿಚಾರವಾಗಿ ಬೆಂಗಳೂರಿನಲ್ಲಿ ಸಚಿವ ಎನ್ಎಸ್ ಬೊಸ ರಾಜು ಅವರು ಪ್ರತಿಕ್ರಿಯೆ ನೀಡಿ, ಗುತ್ತಿಗೆದಾರರಿಂದ ಕಮಿಷನ್ ಪಡೆದಿದ್ದನ್ನು ಸಾಬೀತು ಮಾಡಿದರೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದರು.
ರಾಜ್ಯ ಗುತ್ತಿಗೆದಾರರ ಸಂಘದಿಂದ ಕಮಿಷನ್ ಆರೋಪ ವಿಚಾರವಾಗಿ ಕಮಿಷನ್ ಪಡೆದಿದ್ದನ್ನು ಸಾಬೀತು ಮಾಡಿದರೆ ರಾಜೀನಾಮೆ ನೀಡುತ್ತೇನೆ ಎಂದು ಬೆಂಗಳೂರಿನಲ್ಲಿ ಸಣ್ಣ ನೀರಾವರಿ ಸಚಿವ ಎನ್ಎಸ್ ಬೋಸರಾಜು ಹೇಳಿಕೆ ನೀಡಿದರು ಮೊದಲು ನಮ್ಮ ಸ್ಪಷ್ಟನೆ ಕೇಳಲಿ ಆಮೇಲೆ ಆರೋಪ ಮಾಡಲಿ ಎಂದು ಅವರು ತಿಳಿಸಿದರು.
ನನ್ನ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲ ಇಲಾಖೆಯಲ್ಲಿ ಅಧಿಕಾರಿಗಳ ತಪ್ಪು ಕಂಡು ಬಂದಾಗ ನಾನು ಸರಿಪಡಿಸಿದ್ದೇನೆ ಗುತ್ತಿಗೆದಾರರ ಬಗ್ಗೆ ನಾನು ಆರೋಪ ಮಾಡುವುದಿಲ್ಲ. ಆದರೆ ಗುತ್ತಿಗೆದಾರರು ಕೂಡ ಸುಮ್ಮನೆ ಆರೋಪ ಮಾಡಬಾರದು ಎಂದು ಎನ್ ಎಸ್ ಹೊಸರಾಜು ತಿಳಿಸಿದರು.