ಬೆಂಗಳೂರು : ಬೆಂಗಳೂರಿನಲ್ಲಿ ಮನೆಯ ಬಳಿ ವೆಹಿಕಲ್ ಪಾರ್ಕ್ ವಿಚಾರಕ್ಕೆ ಗಲಾಟೆ ನಡೆದಿದ್ದು, ಬೆಂಗಳೂರಿನ ಮೈಕೋ ಲೇಔಟ್ ನಲ್ಲಿ ಈ ಒಂದು ಗಲಾಟೆ ನಡೆದಿದೆ. ಅಕ್ಕ ಪಕ್ಕದ ಮನೆ ನಿವಾಸಿಗಳು ವೆಹಿಕಲ್ ಪಾರ್ಕಿಂಗ್ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗಲಾಟೆ ವೇಳೆ ಯುವತಿಯ ಮೇಲೆ ಯುವಕ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಹಿಂದೆಯೂ ಕೂಡ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದರು. ಹಲ್ಲೆಗೆ ಒಳಗಾದ ಯುವತಿಗೆ ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೂರು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕಿದ್ದಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಬಿಟಿಎಂ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.