ಮೈಸೂರು : ರಾಜ್ಯ ಸರ್ಕಾರವು ರಾಜ್ಯದ ಎಲ್ಲ ಬಡ ಕುಟುಂಬಗಳ ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷಿö್ಮ ಯೋಜನೆಯನ್ನು ಜಾರಿಗೆ ತಂದು, ಸಂಕಷ್ಟದಲ್ಲಿದ್ದವರಿಗೆ ನೆರವಾಗುವುದು, ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಯೋಜನೆಯ ಆಶಯವಾಗಿದ್ದು, ಮಹಿಳಾ ಕೂಲಿ ಕಾರ್ಮಿಕರು, ಬಡ ಕುಟುಂಬದ ಮಹಿಳೆಯರಿಗೆ ರಾಜ್ಯ ಸರ್ಕಾರದ ಗೃಹಲಕ್ಷ್ಮಿಯೋಜನೆಯು ಆಸರೆಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ವ ಕ್ಷೇತ್ರ ವರುಣಾ ವಿಧಾನಸಭಾ ಕ್ಷೇತ್ರಕ್ಕೆಸೇರಿದ ರಾಂಪುರದಲ್ಲಿ ಮಹಿಳೆಯೊಬ್ಬರು ತಮ್ಮ ಖಾತೆಗೆ ಬಂದಿದ್ದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಳಸಿಕೊಂಡು ಶೌಚಾಲಯ ನಿರ್ಮಿಸಿಕೊಂಡಿದ್ದಾರೆ.
ಹೌದು, ಗ್ರಾಮದ ನಿವಾಸಿ ಮಂಜುಳಾ ಎಂಬುವರು ಟೈಲರಿಂಗ್ ವೃತ್ತಿ ಮಾಡಿ ಕೊಂಡಿದ್ದು, ಹೊಲಿಗೆ ಯಂತ್ರ ಖರೀದಿ ಸುವ ಉದ್ದೇಶದಿಂದ ಪ್ರತಿ ತಿಂಗಳು ಬರುತ್ತಿದ್ದ 2 ಸಾವಿರ ರೂ. ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಶೌಚಾಲಯ ನಿರ್ಮಿಸಿಕೊಂಡಿದ್ದಾರೆ. ಡಿಸೆಂಬರ್‌ನಲ್ಲಿ ಗ್ರಾಮದಲ್ಲಿ ನಡೆದ ಶೌಚಾಲಯ ಬಳಕೆ ಜಾಗೃತಿ ಜಾಥಾವು ಸ್ವಂತಕ್ಕೆ ಶೌಚಗೃಹ ಕಟ್ಟಿಸಿಕೊಳ್ಳಲು ಪ್ರೇರಣೆಯಾಯಿತು ಎಂದು ಹೇಳಿದ್ದಾರೆ.