ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಕೂಡಲೇ ರಾಜ್ಯದಲ್ಲಿ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಪ್ರಮುಖವಾಗಿ ಮಹಿಳೆಯರಿಗೆ ಎಂದೆ ಜಾರಿಯಾಗಿರುವ ಶಕ್ತಿ ಯೋಜನೆ. ಇದುವರೆಗೂ ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ ಮಹಿಳೆಯರು ಒಟ್ಟು 400 ಕೋಟಿ ಬಾರಿ ಪ್ರಯಾಣಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಈ ಕುರಿತು ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶಕ್ತಿ ಯೋಜನೆಯು ಕರುನಾಡಿನಲ್ಲಿ ಶಕ್ತಿ ಸಂಚಾರವನ್ನೇ ಸೃಷ್ಟಿಸಿದೆ. ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿರುವುದು ಯೋಜನೆಯ ಯಶಸ್ಸಿಗೆ ಹಿಡಿದಿರುವ ಕೈಗನ್ನಡಿ.
ಶಕ್ತಿ ಯೋಜನೆ ಜಾರಿಗೊಂಡ ನಂತರದಿಂದ 400 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದು ಸ್ವಾವಲಂಬಿ ಬದುಕಿನೆಡೆಗೆ ಮುಂದಡಿಯಿಟ್ಟಿದ್ದಾರೆ. ಈವರೆಗಿನ ಒಟ್ಟು ಟಿಕೆಟ್ ಮೌಲ್ಯ ರೂ.9,803 ಕೋಟಿ ಆಗಿದ್ದು, ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಶಕ್ತಿ ನವ ಇತಿಹಾಸ ಸೃಷ್ಟಿಸಿದೆ ಎಂದು ತಿಳಿಸಿದ್ದಾರೆ.
ಶಕ್ತಿ ಯೋಜನೆಯು ಕರುನಾಡಿನಲ್ಲಿ ಶಕ್ತಿ ಸಂಚಾರವನ್ನೇ ಸೃಷ್ಟಿಸಿದೆ.
ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿರುವುದು ಯೋಜನೆಯ ಯಶಸ್ಸಿಗೆ ಹಿಡಿದಿರುವ ಕೈಗನ್ನಡಿ.
ಶಕ್ತಿ ಯೋಜನೆ ಜಾರಿಗೊಂಡ ನಂತರದಿಂದ 400 ಕೋಟಿ ಬಾರಿ… pic.twitter.com/TbPepdvvSW
— Siddaramaiah (@siddaramaiah) February 26, 2025