ಬೆಂಗಳೂರು : ಕಳೆದ ವರ್ಷ ರಾಜ್ಯದ ಬಳ್ಳಾರಿ ಬೆಳಗಾವಿ ರೈಚೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣಗಳು ನಡೆದಿತ್ತು. ಇದೀಗ ಈ ಒಂದು ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ ಚೌದರಿ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಕರಣದ ವರದಿಯನ್ನು ಸಲ್ಲಿಸಿದ್ದಾರೆ.
ಕರ್ನಾಟಕದಲ್ಲಿ ಹೆರಿಗೆಯ ನಂತರ ತಾಯಂದಿರ ಸಾವುಗಳ ಬಗ್ಗೆ ರಾಜ್ಯ ಮಹಿಳಾ ಆಯೋಗದ ವರದಿ ಗಂಭೀರ ಸಮಸ್ಯೆಗಳನ್ನು ಬಹಿರಂಗಪಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿನ ಅನುಚಿತ ನೈರ್ಮಲ್ಯ, ಸಿಬ್ಬಂದಿ ಕೊರತೆ, ಪೌಷ್ಟಿಕಾಂಶದ ಕೊರತೆ ಮತ್ತು ಸೂಕ್ತ ವೈದ್ಯಕೀಯ ಸೌಲಭ್ಯಗಳ ಕೊರತೆಯನ್ನು ವರದಿ ಉಲ್ಲೇಖಿಸಿದೆ. ತುರ್ತು ಆರೋಗ್ಯ ಸುಧಾರಣೆಗಳನ್ನು ಕೈಗೊಳ್ಳುವಂತೆ ವರದಿ ಶಿಫಾರಸು ಮಾಡಿದೆ.
ವರದಿಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿನ ನೀರಿನ ಟ್ಯಾಂಕ್‌ಗಳಲ್ಲಿ ಪಾಚಿಕಟ್ಟಿದ್ದು ನೀರು ಕಲುಷಿತಗೊಂಡಿದ್ದು ಅದೇ ನೀರು ಹೆರಿಗೆ ಕೊಠಡಿಗೂ ಸರಬರಾಜು ಆಗುತ್ತಿದೆ. ಆ ನೀರಿನಲ್ಲಿ ಅಪಾಯಕಾರಿ ಬ್ಯಾಕ್ಟಿರಿಯಾಗಳು ಇರುವ ಸಾಧ್ಯತೆ ಇದ್ದು ಪ್ರಾಣಾಪಾಯಕ್ಕೂ ಎಡೆಮಾಡಿಕೊಡುವ ಸಂಭವವಿರುತ್ತದೆ. ಹಾಗಾಗಿ ಆಸ್ಪತ್ರೆಗಳಲ್ಲಿನ ನೀರಿನ ಟ್ಯಾಂಕ್‌ಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸುವುದು ಹಾಗೂ ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಕಾಲಕಾಲಕ್ಕೆ ಪರೀಕ್ಷೆ ಮಾಡಿಸಿ ಅಪಾಯಕಾರಿ ಬ್ಯಾಕ್ಟಿರಿಯಾ ಇಲ್ಲದೇ ಇರುವ ಬಗ್ಗೆ ಖಚಿತಪಡಿಸುವಂತೆ ಸೂಚಿಸಲಾಗಿದೆ.
ಗರ್ಭಿಣಿ ಸ್ತ್ರೀಯರಿಗೆ ಸರ್ಕಾರದಿಂದ ದೊರಕುತ್ತಿರುವ ಮೊಟ್ಟೆ ಮುಂತಾದ ಪೌಷ್ಠಿಕ ಆಹಾರಗಳು ಸರಿಯಾಗಿ ದೊರಕುತ್ತಿರುವುದಿಲ್ಲ. ಅವುಗಳನ್ನು ಸರಿಯಾಗಿ ವಿತರಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡುವುದು.ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಹೆರಿಗೆ ಕೊಠಡಿಗಳು, ICU, ವೆಂಟಿಲೇಟರ್ಸ್ ಗಳು ಇರುವಂತೆ ನೋಡಿಕೊಳ್ಳುವುದು ಹಾಗೂ ಅವುಗಳ ಸಂಖ್ಯೆಯನ್ನು ಹೆಚ್ಚಿಸುವುದು. ಎಕ್ಲ್ಯಾಂಪ್ಸಿಯ ಕಿಟ್ ಗಳು ಇರುವಂತೆ ನೋಡಿಕೊಳ್ಳುವುದು.
ಸರ್ಕಾರಿ ಆಸ್ಪತ್ರೆಗಳಲ್ಲಿ ನುರಿತ ಸ್ಕ್ಯಾನಿಂಗ್ ತಜ್ಞರು, ಸ್ತ್ರೀರೋಗ ತಜ್ಞರು, ರೇಡಿಯಾಲಜಿಸ್ಟ್ ಹಾಗೂ ಇತರೆ ಸಿಬ್ಬಂದಿಗಳ ಕೊರತೆ ಮುಖ್ಯವಾಗಿ ಎದ್ದು ಕಾಣುತ್ತಿದೆ. ರೋಗಿಗಳಿಗನುಸಾರವಾಗಿ ಎಲ್ಲಾ ಆಸ್ಪತ್ರೆಗಳಿಗೆ ಸಿಬ್ಬಂದಿಗಳನ್ನು ಶೀಘ್ರ ನೇಮಕ ಮಾಡಲು ಕ್ರಮ ವಹಿಸುವುದು.ಗರ್ಭಿಣಿಯರಿಗೆ ಯಥೇಚ್ಛವಾಗಿ ನೀರು ಕುಡಿಯುವಂತೆ ಮಾಹಿತಿ ನೀಡುವುದು. ಪ್ರತಿ ಎರಡು ತಿಂಗಳಿಗೊಮ್ಮೆ ಯೂರಿನ್ ರುಟೆನ್ ಟೆಸ್ಟ್ ಕಡ್ಡಾಯವಾಗಿ ಮಾಡುವುದು.
ಸರ್ಕಾರಿ ಆಸ್ಪತ್ರೆಗಳಲ್ಲಿ ನುರಿತ ಸ್ಕ್ಯಾನಿಂಗ್ ತಜ್ಞರು, ಸ್ತ್ರೀರೋಗ ತಜ್ಞರು, ರೇಡಿಯಾಲಜಿಸ್ಟ್ ಹಾಗೂ ಇತರೆ ಸಿಬ್ಬಂದಿಗಳ ಕೊರತೆ ಮುಖ್ಯವಾಗಿ ಎದ್ದು ಕಾಣುತ್ತಿದೆ. ರೋಗಿಗಳಿಗನುಸಾರವಾಗಿ ಎಲ್ಲಾ ಆಸ್ಪತ್ರೆಗಳಿಗೆ ಸಿಬ್ಬಂದಿಗಳನ್ನು ಶೀಘ್ರ ನೇಮಕ ಮಾಡಲು ಕ್ರಮ ವಹಿಸುವುದು.ಶಸ್ತ್ರ ಚಿಕಿತ್ಸೆ, ರಕ್ತ ಪರೀಕ್ಷೆಗಳನ್ನು ಮಾಡುವಾಗ ಉಪಕರಣಗಳನ್ನು ಸ್ವಚ್ಛಗೊಳಿಸಲು ಸೋಂಕು ನಿವಾರಕ ದ್ರಾವಣಗಳನ್ನು ಬಳಸುತ್ತಿರುವುದಿಲ್ಲ. ಸೋಂಕು ನಿವಾರಕ ದ್ರಾವಣಗಳಿಂದ ಉಪಕರಣಗಳನ್ನು ಸ್ವಚ್ಛಗೊಳಿಸಲು ಕ್ರಮವಹಿಸುವುದು. ಆಟೋ ಕ್ಷೇವ್ ವಿಧಾನದ ಮೂಲಕ ಸಾಧನಗಳನ್ನು ಸ್ಪೆರಲೈಸೇಶನ್ ಮಾಡುವುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.