ಹಾವೇರಿ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ ಈ ಹಿನ್ನೆಲೆಯಲ್ಲಿ ಇಂದು ಹಾವೇರಿ ಜಿಲ್ಲೆಯ ಸವಣೂರಲ್ಲಿ ಕಾಂಗ್ರೆಸ್ ಕೃತಜ್ಞತಾ ಸಮಾವೇಶ ಹಮ್ಮಿಕೊಂಡಿದೆ. ಈ ಒಂದು ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಯಾವುದೇ ಕಾರಣಕ್ಕೂ ಅಕ್ಕಿ ಕಡಿಮೆ ಮಾಡಲ್ಲ ಎಂದು ತಿಳಿಸಿದರು.
ಹಾವೇರಿ ಜಿಲ್ಲೆಯ ಸವಣೂರಲ್ಲಿ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಕಡಿಮೆ ಮಾಡಲ್ಲ. ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳಲ್ಲ. ಅರ್ಹ ಇರುವ ಎಲ್ಲರಿಗೂ ಅಕ್ಕಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ದೇಶದಲ್ಲಿ ನಮ್ಮ ರಾಜ್ಯದಲ್ಲಿ ಅಷ್ಟೇ 10 ಕೆಜಿ ಅಕ್ಕಿ ಕೊಡುತ್ತಿದ್ದೇವೆ. 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಗೆ ತಗುಲುವ ಹಣ ಕೊಡುತ್ತಿದ್ದೇವೆ. ಕೇಂದ್ರ ಸರ್ಕಾರ ಅಕ್ಕಿ ಇಟ್ಟುಕೊಂಡು ಸಹ ಅಕ್ಕಿ ಕೊಡಲಿಲ್ಲ. ಬಿಜೆಪಿ ಅಧಿಕಾರ ಇರುವ ರಾಜ್ಯದಲ್ಲಿ 10 ಕೆಜಿ ಅಕ್ಕಿ ಕೊಡುತ್ತಾರಾ? ಬಿಜೆಪಿ 10 ಕೆಜಿ ಅಕ್ಕಿ ಕೊಡ್ದಿದ್ರೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದರು.
ಕಳೆದ ಹಲವು ದಿನಗಳ ಹಿಂದೆ ಅನರ್ಹರು ಬಿಪಿಎಲ್ ಕಾರ್ಡ್ಗಳನ್ನು ಹೊಂದಿದ್ದರು. ಇವುಗಳ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಬಿಪಿಎಲ್ ಫಲಾನುಭವಿಗಳ ಕಾರ್ಡ್ ಗಳು ಸಹ ರದ್ದಾಗಿದ್ದವು. ಬಳಿಕ ತಕ್ಷಣ ಎಚ್ಚೆತ್ತುಕೊಂಡ ಆಹಾರ ಇಲಾಖೆಯು ಒಂದೇ ವಾರದಲ್ಲಿ ಅರ್ಹ ಫಲಾನುಭವಿಗಳಿಗೆ ಮತ್ತೆ ಬಿಪಿಎಲ್ ಕಾರ್ಡ್ಗಳನ್ನು ವಿತರಿಸಿದೆ.