ಬೀದರ್ : ವಕ್ಫ್ ವಿರುದ್ಧದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದ ಅಭಿಯಾನಕ್ಕೆ ಇಂದು ಬೀದರ್ ನಲ್ಲಿ ಅಧಿಕೃತವಾಗಿ ಚಾಲನೆ ಸಿಗಲಿದೆ.
ಬೀದರ್ ನಲ್ಲಿ ಇಂದಿನಿಂದ ಡಿಸೆಂಬರ್ 1 ರವರೆಗೆ ಐದು ಜಿಲ್ಲೆಗಳಲ್ಲಿ ವಕ್ಫ್ ವಿರುದ್ಧ ಹೋರಾಟ ನಡೆಯಲಿದ್ದು, ಬಳಿಕ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಕ್ಫ್ ನಿಂದಾಗಿರುವ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯಲಿದೆ. ಯತ್ನಾಳ್ ಅಭಿಯಾನಕ್ಕೆ ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ, ಪ್ರತಾಪ್ ಸಿಂಹ, ಜಿ.ಎಂ. ಸಿದ್ದೇಶ್ವರ್ ಸೇರಿದಂತೆ ಹಲವು ನಾಯಕರು ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ.
ವಕ್ಫ್ ವಿರುದ್ಧ ಬೀದರ್ ನಿಂದ ಆರಂಭವಾಗಲಿರುವ ಯತ್ನಾಳ್ ನೇತೃತ್ವದ ಹೋರಾಟದಲ್ಲಿ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಪ್ರಮುಖ ಮುಖಂಡರು ಗೈರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.