ಗದಗ : ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿರುವ ಘಟನೆ ಹುಯಿಲಗೋಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಚಂದ್ರು ಕುರಿ (28) ಮೃತನಾಗಿದ್ದು, ಕುಟುಂಬಸ್ಥರು ಕೊಲೆ ಎಂದು ಆರೋಪಿಸಿದ್ದಾರೆ.
ಚಂದ್ರು ಕಳೆದ ಐದು ದಿನಗಳ ಹಿಂದೆ ರಾತ್ರಿ ಸುಮಾರು 12 ಗಂಟೆಗೆ ಮನೆಯಿಂದ ಹೊರಹೋಗಿದ್ದವನು ಮನೆಗೆ ಮರಳಿ ಬಾರದ ಹಿನ್ನೆಲೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಶನಿವಾರ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು. ಇದೀಗ ಐದು ದಿನಗಳ ಬಳಿಕ ಸುಟ್ಟ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ.
ದುಷ್ಕರ್ಮಿಗಳು ಚಂದ್ರುನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿ, ನಂತರ ಗುರುತು ಸಿಗದಂತೆ ಮಾಡಲು ಶವವನ್ನು ಸುಟ್ಟು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.








