ಬೆಳಗಾವಿ : ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳು ಡಿಕ್ಲರೇಶನ್ ನೀಡುವುದು ಕಡ್ಡಾಯವಾಗಿದ್ದು, ತಪ್ಪದೇ ಡಿಕ್ಲರೇಶನ್ ಮಾಡುವಂತೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಯುವನಿಧಿ ಯೋಜನೆ ಅಡಿ ನೋಂದಾಯಿಸಿದ ಅರ್ಹ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಈ ಯೋಜನೆ ತಲುಪುತ್ತಿದೆ. ಯುವನಿಧಿ ಯೋಜನೆ ಅಡಿಯಲ್ಲಿ ನೋಂದಾಯಿಸಿದ ಅಭ್ಯರ್ಥಿಗಳು ಪ್ರತಿ ತಿಂಗಳು ಡಿಕ್ಲರೇಶನ್ ನೀಡುವುದು ಕಡ್ಡಾಯವಾಗಿದ್ದು, ಇದನ್ನು ನೀಡದೆ ಇದ್ದಲ್ಲಿ ಭತ್ಯೆ ಸ್ಥಗಿತಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಈವರೆಗೆ 1,81,699 ಪದವೀಧರರು ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, ಅವರಲ್ಲಿ ಈವರೆಗೆ 1,45,978 ಪದವೀಧರರಿಗೆ ನೇರ ನಗದು ವರ್ಗಾವಣೆ ಮಾಡುವ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲಾಗಿದೆ ಎಂದು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ.