ಮಂಡ್ಯ : ಸಕ್ಕರೆ ನಗರಿ ಮಂಡ್ಯದಲ್ಲಿ ಡಿ. 20, 21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ,ಆಡಳಿತದಲ್ಲಿ ಕನ್ನಡ ಭಾಷೆ ಬಳಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಮಗ್ರ ಕನ್ನಡ ಭಾಷಾ ಬಳಕೆಯನ್ನು ಜಾರಿಗೆ ತಂದಿದ್ದೇವೆ. ಕನ್ನಡಕ್ಕೆ ಮೊದಲ ಪ್ರಾಶಸ್ತ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಎಷ್ಟೇ ಭಾಷೆ ಕಲಿತರು ಕೂಡ ಹೃದಯದ ಭಾಷೆ ಮಾತೃ ಭಾಷೆಯಾಗಿರುತ್ತದೆ. ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣಗಳನ್ನು ತಿಳಿದುಕೊಳ್ಳಬೇಕಿದೆ. ಕನ್ನಡ ಉಳಿಯಬೇಕಾದರೆ ಮಕ್ಕಳನ್ನು ಕನ್ನಡ ಶಾಲೆಗೆ ಸೆಳೆಯಬೇಕಾಗಿದೆ. ಆಡಳಿತದಲ್ಲಿ ಕನ್ನಡ ಭಾಷೆ ಬಳಸಲು ಸರ್ಕಾರ ಬದ್ಧವಾಗಿದೆ. ನಾವು ಬದುಕುತ್ತಿರುವ ಕಾಲ ಅತ್ಯಂತ ವಿಷಯವಾಗಿದೆ ಜಗತ್ತಿನ ಮಹತ್ವದ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಬೇಕಿದೆ. ಕುವೆಂಪು ಮಾಡಿರುವ ಸ್ಮರಣೆಯ ಕೆಲಸಗಳನ್ನು ನೆನಪಿಸಿಕೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವೇದಿಕೆ ಮೇಲೆ ಜ್ಯೋತಿ ಬೆಳಗಿಸುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ಇಂದಿನಿಂದ ಮೂರು ದಿನಗಳ ಕಾಲ ಈ ಒಂದು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸ್ಪೀಕರ್ ಯುಟಿ ಖಾದರ್, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಿರ್ಮಲಾನಂದನಾಥಶ್ರೀ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ, ಸಚಿವರಾದ ಡಾ. ಮಹದೇವಪ್ಪ, ಶಿವರಾಜ್ ತಂಗಡಗಿ, ಕೆ ಹೆಚ್ ಮುನಿಯಪ್ಪ, ಶಾಸಕರಾದ ರವಿ ಗಣಿಗ, ರಮೇಶ್ ಬಾಬು ಬಂಡಿಸಿದ್ದೇಗೌಡ, ಪಿಎಂ ನರೇಂದ್ರಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ಎಚ್ ಡಿ ಮಂಜು ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ ಮಾದೇಗೌಡ, ಕಸಾಪ ಅಧ್ಯಕ್ಷ ಮಹೇಶ್ ಜೋಶಿ, ಡಾ. ಚಂದ್ರಶೇಖರ್ ಕಂಬಾರ್ ಡಿಸಿ ಡಾ. ಕುಮಾರ್ ಎಸ್ ಪಿ ಮಲ್ಲಿಕಾರ್ಜುನ್ ಬಾಲದಂಡೆ ಉಪಸ್ಥಿತಿ ಇದ್ದರು.
ಇದಕ್ಕೂ ಮುನ್ನ ಬೆಳಗ್ಗೆ 6.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರ ಉಪಸ್ಥಿತಿಯಲ್ಲಿ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷರಾದ ಎನ್. ಚಲುವರಾಯಸ್ವಾಮಿ ಅವರು ರಾಷ್ಟ್ರಧ್ವಜಾರೋಹಣ ಮಾಡಿದರು.ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಗೌರವ ಕಾರ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣವನ್ನು ಹಾಗೂ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕಿ ಮೀರಾ ಶಿವಲಿಂಗಯ್ಯ ಅವರು ನಾಡ ಧ್ವಜಾರೋಹಣ ಮಾಡಿದರು.
ಶಾಸಕರುಗಳಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ನಾನಾ ಗಣ್ಯರು ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ್ ಸೇವಾದಳದ ಮಕ್ಕಳು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.