ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ಇಲಾಖೆಯ ನೌಕರರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು. ಡಿ.31 ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಅವರು ಈಗಾಗಲೇ ಡಿಸೆಂಬರ್ 31 ರಿಂದ ಸಾರಿಗೆ ಮುಷ್ಕರಕ್ಕೆ ಈಗಾಗಲೇ ಕರೆ ನೀಡಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಂದು ಸಾರಿಗೆ ನೌಕರರು ಬೆಳಗಾವಿ ಚಲೋ ನಡೆಸಲಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನೋಟಿಸ್ ನೀಡಲಾಗುವುದು. ಬಳಿಕ ಡಿಸೆಂಬರ್ 31ರಿಂದ ಸಾರಿಗೆ ಮುಷ್ಕರ ಆರಂಭಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದ 6 ಸಾರಿಗೆ ನೌಕರರ ಸಂಘಟನೆಗಳ ಒಕ್ಕೂಟ ಸೇರಿ ಜಂಟಿ ಕ್ರಿಯಾ ಸಮಿತಿ ಮಾಡಿಕೊಂಡಿದ್ದು, 6 ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಘೋಷಿಸಿವೆ. ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡಿದರೆ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ.