ಬೆಂಗಳೂರು : ನಿನ್ನೆ ಹೆಬ್ಬಗೋಡಿ ಠಾಣೆ ಪೊಲೀಸರು ಕಳೆದ 12 ವರ್ಷಗಳಿಂದ ಬೆಂಗಳೂರಿನಲ್ಲಿ ಇದ್ದು ಟ್ರಕ್ಸ್ ದಂತೆ ಮಾಡುತ್ತಿದ್ದ ನೈಜೀರಿಯಾ ಏನು ಅರೆಸ್ಟ್ ಮಾಡಿದ್ದು 14 ಕೋಟಿಗೂ ಹೆಚ್ಚು ಡ್ರಗ್ಸ್ ಅನ್ನು ಜತ್ತಿ ಮಾಡಿದರು ಇದೀಗ ಬೆಂಗಳೂರು ಏರ್ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದು, 2 ಪ್ರತ್ಯೇಕ ಕೇಸ್ ಗಳಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
ಹೌದು ಮೊದಲ ಪ್ರಕರಣದಲ್ಲಿ ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಲಗೇಜ್ ತಪಾಸಣೆ ವೇಳೆ 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿತ್ತು. ಇದರ ಮಾರುಕಟ್ಟೆ ಮೌಲ್ಯ ಸುಮಾರು 3.39 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿತ್ತು. ಆರೋಪಿಯನ್ನು ತಕ್ಷಣವೇ ವಶಕ್ಕೆ ಪಡೆದು, ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.
ಇನ್ನೊಂದು ಪ್ರಕರಣದಲ್ಲಿ, ಬ್ಯಾಂಕಾಕ್ನಿಂದ ಆಗಮಿಸಿದ್ದ ಮತ್ತೊಬ್ಬ ಪ್ರಯಾಣಿಕ ಕ್ಯಾಂಡಿ ಪ್ಯಾಕೆಟ್ಗಳಲ್ಲಿ ಅಡಗಿಸಿ ಮಾದಕ ವಸ್ತುವಾದ ಚರಸ್/ಹಶೀಶ್ ಸಾಗಿಸುತ್ತಿರುವುದನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದರು. ಈ ವೇಳೆ ಸುಮಾರು 1.7 ಕೆಜಿ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿತ್ತು. ಅದರ ಮೌಲ್ಯ ಸುಮಾರು 4.7 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿತ್ತು. ಆರೋಪಿಯನ್ನು ಎನ್ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.








