ಬೆಂಗಳೂರು : ಕಿಸ್ಮಸ್ ಹಬ್ಬ & ಹೊಸ ವರ್ಷ ಸಂಭ್ರಮಾಚರಣೆ ಸಿಟಿಕಾನ್ ಸಿಟಿ ಬೆಂಗಳೂರು ಭರ್ಜರಿಯಾಗಿ ಒಂದೆಡೆ ಸಿದ್ದವಾಗುತ್ತಿದ್ದರೆ ಇನ್ನೊಂದೆಡೆ ಪೊಲೀಸರು ಭದ್ರತೆಯ ಬಗ್ಗೆ ಹೆಚ್ಚಿನ ತಲೆಕೆಡಿಸಿಕೊಳ್ಳೊದಕ್ಕೆ ಮುಂದಾಗಿದ್ದಾರೆ. ನಿಟ್ಟಿನಲ್ಲಿ ಬೆಂಗಳೂರು ಕಮಿಷನರ್ ಪ್ರತಾಪ್ ರೆಡ್ಡಿ ಅವರು ಪೊಲೀಸರಿಗೆ ಹೊಸ ಟಾಸ್ಕ್ಗಳ ಪಟ್ಟಿಯನ್ನು ರಿಲೀಸ್ ಮಾಡಿದ್ದಾರೆ ಏನೆಲ್ಲ ಅಂಶಗಳನ್ನು ಒಳಗೊಂಡಿದೆ ಅನ್ನೋದರ ಕಂಪ್ಲೀಟ್ ಮಾಹಿತಿ ಇಲ್ಲಿದೆ ಓದಿ
BIGG NEWS : ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿ ವಿಚಾರ ವಿವಾದವೇ ಅಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ
1) ಉಪ ಪೊಲೀಸ್ ಆಯುಕ್ತರುಗಳು ತಮ್ಮ ಅಧೀನದ ಎಲ್ಲಾ ಪೊಲೀಸ್ ಠಾಣೆಗಳಿಗೆ ಇಲಾಖಾ ವತಿಯಿಂದ ಹಂಚಿಕೆಯಾಗಿರುವ ಎಲ್ಲಾ ದ್ವಿ-ಚಕ್ರ ವಾಹನಗಳನ್ನು ಮೊಬೈಲ್ ಪೆಟ್ರೋಲಿಂಗ್ ವಾಹನಗಳನ್ನಾಗಿ ಉಪಯೋ ಸೂಕ್ತ ಗಸ್ತು ನಿರ್ವಹಿಸುವ ಬಗ್ಗೆ ಕ್ರಮ ಕೈಗೊಳ್ಳುವುದು.
2) ಉಪ ಪೊಲೀಸ್ ಆಯುಕ್ತರುಗಳು ಹೊಸ ವರ್ಷಾಚರಣೆ ಬಂದೋಬಸ್ತ್ ಯೋಜನೆಯಲ್ಲಿ ವಲಯವಾರು ಬಂದೋಬಸ್ತ್ ಮತ್ತು ಸೆಕ್ಟರ್ ಮೊಬೈಲ್ಗಳನ್ನು ಕರ್ತವ್ಯಕ್ತಿ ನಿಯೋಜಿಸಿ, ಅವುಗಳಿಗೆ ನಿಗದಿತ ಸಮಯ ಹಾಗೂ ನಿಗದಿತ ರೂಟ್ ಅನ್ನು ಕೊಟ್ಟು, ಸೆಕ್ಟರ್ ಪೆಟ್ರೋಲಿಂಗ್ ಅನ್ನು ವ್ಯವಸ್ಥಿತವಾಗಿ ಏರ್ಪಡಿಸಲು ಸೂಚಿಸಲಾಗಿದೆ.
3). ಹೊಸ ವರ್ಷಾಚರಣೆಯನ್ನು ವಿರೋಧಿಸುವ ಸಂಘ ಸಂಸ್ಥೆಗಳ ಬಗ್ಗೆ ಮುಂಗಡವಾಗಿ ಮಾಹಿತಿ ಸಂಗ್ರಹಿಸಿ ಅಂತಹ ಸಂಘ ಸಂಸ್ಥೆಗಳ ಚಲನವಲನಗಳ ಬಗ್ಗೆ ಗುಪ್ತ ಮಾಹಿತಿ ಸಂಗ್ರಹಿಸಿ, ಅಗತ್ಯ ಮುನ್ನೆಚ್ಚಕ ಕ್ರಮಗಳನ್ನು ಕೈಗೊಳ್ಳುವುದು.
4) ಉಪ ಪೊಲೀಸ್ ಆಯುಕ್ತರುಗಳು ಎಲ್ಲಾ ಮಾಲ್ಗಳ ವ್ಯವಸ್ಥಾಪಕರಿಗೆ ಲಿಖಿತವಾದ ಸೂಚನೆ ನೀಡಿ, ಅವರುಗಳು ಮಾಲ್ಗಳಿಗೆ ಒಳಬರುವ ವ್ಯಕ್ತಿಗಳ ವೈಯಕ್ತಿಕ ಶೋಧನೆ ಹಾಗೂ ಅವರುಗಳ ಲಗೇಜುಗಳ ಪರಿಶೀಲನೆಯನ್ನು ಹೆಚ್.ಹೆಚ್.ಎಂಡಿ/ಡಿ.ಎಫ್.ಎಂ.ಡಿ. ಇವುಗಳನ್ನು ಅಳವಡಿಸಿ ಪರಿಶೀಲನೆ ಮಾಡುವ ಅಗತ್ಯತೆ ಬಗ್ಗೆ ಮತ್ತೊಮ್ಮೆ ತಿಳಿಸುವುದು.
5) ಮಾಲ್ಗಳಲ್ಲಿ ಅಳವಡಿಸಿರುವ ಸಿ.ಸಿ.ಕ್ಯಾಮೆರಾಗಳು ಸುಸ್ಥಿತಿಯಲ್ಲಿರುವ ಬಗ್ಗೆ, ಮಾಲ್ಗಳಿಗೆ ಆಗಮಿಸುವ ವಾಹನಗಳನ್ನೂ ಸಹ ಸೂಕ್ತವಾಗಿ ಪರಿಶೀಲಿಸಿದ ನಂತರ ಒಳಪ್ರವೇಶಿಸಲು ಅನುಮತಿ ನೀಡುವ ಬಗ್ಗೆ ಸಂಬಂಧಪಟ್ಟ ಮಾಲ್ಗಳ ಮಾಲೀಕರುಗಳಿಗೆ ಸೂಕ್ತ ತಿಳುವಳಿಕೆ ನೀಡುವುದು.
BIGG NEWS : ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿ ವಿಚಾರ ವಿವಾದವೇ ಅಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ
6) ಎಲ್ಲಾ ಪಿಐರವರುಗಳು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಡಿ.31 ರಂದು ರಾತ್ರಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡು ಮೇಲುಸ್ತುವಾರಿ ವಹಿಸುವುದು
8) ಠಾಣಾ ವ್ಯಾಪ್ತಿಯಲ್ಲಿ ಪ್ರಮುಖ ಸ್ಥಳಗಳಲ್ಲಿ ವಾಹನ ತಪಾಸಣಾ ಪಾಯಿಂಟ್/ಪಿಕೆಟಿಂಗ್ ಪಾಯಿಂಟ್ ಸಿಬ್ಬಂದಿ ನಿಯೋಜಿಸುವುದು.
9) ಬಂದೋಬಸ್ತ್ಗೆ ನೇಮಕ ಮಾಡಿದ ಎಲ್ಲಾ ಅಧಿಕಾರಿಗಳು ಸರ್ವೀಸ್ ರಿವಾಲ್ವಾರ್ ಹೊಂದಿರತಕ್ಕದ್ದು ಹಾಗೂ ಸಿಬ್ಬಂದಿ ಹೆಲೈಟ್ ಮತ್ತು ಲಾಠಿಗಳನ್ನು ಹೊಂದಿರತಕ್ಕದ್ದು.
10) ಎಲ್ಲಾ ಸಿಬ್ಬಂದಿ, ಅಧಿಕಾರಿಗಳು ಜರ್ಸಿ ಹಾಗೂ ರೈನ್ ಕೋಟ್ ಹೊಂದಿರತಕ್ಕದ್ದು.
11) ರಾತ್ರಿ ಸಮಯದಲ್ಲಿ ಸಾರ್ವಜನಿಕರು ಮದ್ಯಪಾನ ಸೇವಿಸಿ ಬರುವ ಸಂಭವವಿರುವುದರಿಂದ ಅಧಿಕಾರಿ ಮತ್ತು ಸಿಬ್ಬಂದಿ ಸೌಜನ್ಯದಿಂದ ವರ್ತಿಸಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಟ್ಟೆಚ್ಚರ ವಹಿಸುವುದು.
12) ಪ್ರಮುಖವಾಗಿ ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಹೆಚ್ಚಿನ ಜನಸಂದಣಿ ಇರುತ್ತದೆ. ಇಂತಹ ಸಮಯದಲ್ಲಿ ಕಿಸೆ ಕಳ್ಳತನ, ಸರ ಅಪಹರಣ ಇತ್ಯಾದಿಗಳು ನಡೆಯುವ ಸಾಧ್ಯತೆಗಳಿರುವುದರಿಂದ ಅಧಿಕಾರಿ ಮತ್ತು ಸಿಬ್ಬಂದಿ, ಸಂಶಯಾಸ್ಪದ ವ್ಯಕ್ತಿಗಳ ಮೇಲೆ ತೀವ್ರ ನಿಗಾವಹಿಸುವುದು ಮತ್ತು ಸಾರ್ವಜನಿಕರ ಜೊತೆ ಸೌಜನ್ಯದಿಂದ ವರ್ತಿಸುವುದು
13) ಹೆಣ್ಣು ಮಕ್ಕಳನ್ನು ಚುಡಾಯಿಸುವವರ ವಿರುದ್ಧ ಕೂಡಲೇ ಗಮನಹರಿಸಿ ಕಾನೂನಿನಡಿಯಲ್ಲಿ ಬಂಧನಕ್ಕೆ ಒಳಗಾಗಿಸುವುದು.
14) ಕುಡಿದು ರಸ್ತೆಗಳ ಮೇಲೆ ಬಾಟಲಿಗಳನ್ನು ಹೊಡೆದು/ಎಸೆದು ದಾಂಧಲೆ ಮಾಡುವವರನ್ನು ಕೂಡಲೇ ವಶಕ್ಕೆ ಪಡೆದು ಅಗತ್ಯ ಕಾನೂನು ಕ್ರಮ ಜರುಗಿಸುವುದು
15) ಮದ್ಯ ಮಾರಾಟ ಮಾಡುವ ಎಲ್ಲಾ ಸ್ಥಳಗಳ ಮಾಲೀಕರಿಗೆ ಕಲಂ.21 ಕರ್ನಾಟಕ ಅಬಕಾರಿ ಕಾಯ್ದೆ ಅಡಿಯಲ್ಲಿ ನೋಟಿಸ್ ಅನ್ನು ಜಾರಿ ಮಾಡುವುದು. ಸದರಿ ಅಂಗಡಿಗಳಲ್ಲಿ/ ಅದರ ಸಮೀಪದಲ್ಲಿ ಆಗುವ ಗಲಾಟೆ, ದೊಂಬಿ, ಮಹಿಳೆಯರನ್ನು ಚುಡಾಯಿಸುವುದು, ಬಾಟಲಿಗಳನ್ನು ಎಸೆಯುವುದು ಇತ್ಯಾದಿಗಳು ನಡೆದರೆ ಅವರನ್ನೇ ಹೊಣೆಗಾರರೆಂದು ಮಾಡಲಾಗುವುದು ಎಂದು ತಿಳಿಸತಕ್ಕದ್ದು.
16) ಜನರು ಸೇರುವ ರಸ್ತೆಗಳನ್ನು ಮತ್ತು ಪ್ರದೇಶಗಳನ್ನು ಗುರುತಿಸಿ ರಾತ್ರಿ ವೇಳೆಯಲ್ಲಿ ರೆಕಾರ್ಡ್ ಆಗುವಂತಹ ಸಿಸಿಟಿವಿ. ಕ್ಯಾಮೆರಾಗಳನ್ನು ಅಳವಡಿಸುವುದು.
17) ಎಲ್ಲಾ ರಸ್ತೆಗಳಲ್ಲಿ ವಿದ್ಯುತ್ ದೀಪಗಳು ಕೆಲಸ ಮಾಡುವಂತೆ ಖಚಿತಪಡಿಸಿಕೊಳ್ಳುವುದು ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಕ್ರಮ ಕೈಗೊಳ್ಳುವುದು.
18) ಡಿ.31 ರಂದು ಸಂಜೆ 6 ಗಂಟೆಯಿಂದ ಮರುದಿನ ಜ.1ರ ವರೆಗೆ ಬೆಳಗ್ಗೆ 6 ಗಂಟೆವರೆಗೆ ಎಲ್ಲಿಯೂ ವಿದ್ಯುತ್ ಕಡಿತವಾಗದಂತೆ ಬೆಸ್ಕಾಂ ಅಧಿಕಾರಿಗಳೊಂದಿಗೆ ಸಮಾಲೋಚಿಸುವುದು.
19) ಜನ ಹೆಚ್ಚಿಗೆ ಸೇರುವ ರಸ್ತೆಗಳಾದ ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಎಂ.ಜಿ.ರಸ್ತೆ ಮತ್ತು ಇತರೆ ರಸ್ತೆಗಳಲ್ಲಿ ಸ್ಥಳಾವಕಾಶಕ್ಕನುಗುಣವಾಗಿ ಜನರ ಆಗಮನ ಮತ್ತು ನಿರ್ಗಮನವನ್ನು ನಿಯಂತ್ರಿಸುವುದು.
BIGG NEWS : ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿ ವಿಚಾರ ವಿವಾದವೇ ಅಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ
20) ಅಬಕಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಂಪರ್ಕವನ್ನಿಟ್ಟುಕೊಂಡು ಪಬ್ಗಳು, ಬಾರ್ & ರೆಸ್ಟೋರೆಂಟ್ಗಳು, ವೈನ್ಶಾಪ್ಗಳು ಇತ್ಯಾದಿ ಸ್ಥಳಗಳಲ್ಲಿ ಅನಧಿಕೃತವಾದ ಮಾರಾಟದ ಬಗ್ಗೆ ಜಂಟಿ ತಪಾಸಣೆಯನ್ನು ಕೈಗೊಳ್ಳುವುದು.
21) ಹೊಸ ವರ್ಷಾಚರಣೆಯ ಸಂದರ್ಭವನ್ನು ಬಳಸಿಕೊಂಡು ದಾಂಧಲೆ ಮಾಡುವ ಕಿಡಿಗೇಡಿಗಳ ವಿರುದ್ಧ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುವುದು.
22) ಎಲ್ಲಾ ಠಾಣೆಯ ಅಧಿಕಾರಿಗಳು, ಎಲ್ಲಾ ಉಪ ವಿಭಾಗಾಧಿಕಾರಿಗಳು ಚಟುವಟಿಕೆಯಲ್ಲಿರುವ ರೌಡಿಗಳು ಹಾಗೂ ಅವರ ಚಟುವಟಿಕೆಗಳ ಬಗ್ಗೆ ನಿಗಾ ವಹಿಸುವುದು
23) ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ಕಬ್ಬನ್ ರೋಡ್ಗಳಲ್ಲಿ ವಾಹನ ನಿಲುಗಡೆಯನ್ನು ನಿಷೇದಿಸಿದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವುದು.
23) ಪ್ರಮುಖ ಪ್ರೈಓವರ್ಗಳ ಮೇಲೆ ವಾಹನ ಸಂಚಾರವನ್ನು ನಿಷೇಧಿಸಿರುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವುದು.
24) ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಿದ ಎಲ್ಲಾ ಅಧಿಕಾರಿಗಳು ತಮ್ಮ ವಾಹನಗಳಿಗೆ ಪಿ.ಎ. ಸಿಸ್ಟಮ್ ಅಳವಡಿಸಿಕೊಳ್ಳುವುದು.
25) ಗಸ್ತು ಮತ್ತು ಪಾಯಿಂಟ್ಗಳಿಗೆ ನೇಮಕ ಮಾಡಿರುವ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಸ್ಥಳಗಳಲ್ಲಿ ಏನಾದರೂ ವಿಶೇಷತೆ ಕಂಡುಬಂದಲ್ಲಿ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತರುವಂತೆ ತಿಳುವಳಿಕೆ ನೀಡುವುದು.
26) ಇತ್ತೀಚಿನ ಭಯೋತ್ಪಾದಕ ಚಟುವಟಿಕೆಗಳ ಹಿನ್ನೆಲೆಯಲ್ಲಿ, ಕೆಲವು ಸಮಾಜ ಘಾತುಕ ಚಟುವಟಿಕೆಗಳು ಶಾಂತಿಭಂಗವನ್ನುಂಟು ಮಾಡುವ ಸಂಭವವಿದ್ದು ಅಂತಹವರ ಮೇಲೆ ಸೂಕ್ತ ನಿಗಾವಹಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವುದು.
BIGG NEWS : ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿ ವಿಚಾರ ವಿವಾದವೇ ಅಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ
27) ಠಾಣೆಯ ಎಲ್ಲಾ ಹೊಯ್ಸಳ ಮತ್ತು ಚೀತಾಗಳು ಠಾಣಾ ಸರಹದ್ದಿನಲ್ಲಿ ಚುರುಕಾದ ಗಸ್ತು ಕರ್ತವ್ಯವನ್ನು ನಿರ್ವಹಿಸುವುದು.
28) ಬಂದೋಬಸ್ತ್ ಕರ್ತವ್ಯಕ್ಕೆ ಅವಶ್ಯಕತೆ ಇರುವ ಹೋಂಗಾಡ್ರ್ಸ್, ಸಿವಿಲ್ ಡಿಫೆನ್ಸ್ ಅಧಿಕಾರಿಗಳು, ಅಗ್ನಿಶಾಮಕ ವಾಹನಗಳು, ಅಂಬುಲೆನ್ಸ್ ವಾಹನಗಳು ಇತ್ಯಾದಿಗಳ ಬಗ್ಗೆ ಡಿ.31 ಒಳಗಾಗಿ ಕೋರಿಕೆಯನ್ನು ಈ ಕಛೇರಿಗೆ ಕಳುಹಿಸುವುದು.
29) ಈ ಸಂಬಂಧ ಏರ್ಪಡಿಸಿರುವ ಬಂದೋಬಸ್ತ್ ಯೋಜನೆಯನ್ನು ಡಿ.31ರ ಒಳಗಾಗಿ ಈ ಕಛೇರಿಯ ಈಮೇಲ್ ableintbcp@ksp.gov.in ಗೆ ಹಾಗೂ ಒಂದು ಪ್ರತಿಯನ್ನು ಈ ಕಳುಹಿಸಿಕೊಡಲು ಸೂಚಿಸಿದೆ
BIGG NEWS : ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿ ವಿಚಾರ ವಿವಾದವೇ ಅಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ
30) ಉಪ ಪೊಲೀಸ್ ಕಮಿಷನರ್, ನಿಯಂತ್ರಣ ಕೋಣೆಯವರು ವಿಭಾಗೀಯ ಉಪ ಪೊಲೀಸ್ ಆಯುಕ್ತರುಗಳು ಕೋರಿರುವಂತೆ ಕೆ.ಎಸ್.ಆರ್.ಪಿ, ಸಿ.ಎ.ಆರ್ ತುಕಡಿಗಳನ್ನು ಮತ್ತು ಇತರೆ ವಾಹನಗಳನ್ನು ಅವರನ್ನು ಸಂಪರ್ಕಿಸಿ ಅವಶ್ಯಕತೆಗನುಗುಣವಾಗಿ ಅವರ ಕೋರಿಕೆಯ ಮೇರೆಗೆ ನಿಗದಿತ ಸ್ಥಳಗಳಿಗೆ ನಿಯೋಜಿಸುವುದು
31) ಪೊಲೀಸ್ ಇನ್ಸ್ಪೆಕ್ಟರ್ಗಳು ಬಂದೋಬಸ್ತ್ ಯೋಜನೆಯಲ್ಲಿ ನಿಯೋಜಿಸಿರುವ ಸ್ಥಳಗಳನ್ನು ಹೊರತುಪಡಿಸಿ ಇನ್ಯಾವುದಾದರೂ ಸೂಕ್ಷ್ಮ/ಪ್ರಮುಖ ಸ್ಥಳಗಳಿದ್ದಲ್ಲಿ ಅಂತಹ ಸ್ಥಳಗಳಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸುವುದು.
BIGG NEWS : ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿ ವಿಚಾರ ವಿವಾದವೇ ಅಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ