ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ನಟ ದರ್ಶನ್‌ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಪ್ರಕರಣಕ್ಕೂ ನಟ ದರ್ಶನ್ ಅವರಿಗೂ ಸಂಬಂಧವಿಲ್ಲದೇ ಇರುವುದರ ಹಿನ್ನಲೆಯಲ್ಲಿ ಅವರ ಹೆಸರನ್ನು ಪೊಲೀಸರು ಚಾರ್ಚ್ ಶೀಟ್‌ನಲ್ಲಿ ಉಲ್ಲೇಖ ಮಾಡಿಲ್ಲ ಎನ್ನಲಾಗಿದೆ.
ಸಾಕು ನಾಯಿ ಮಹಿಳೆಗೆ ಕಚ್ಚಿದ ಆರೋಪ ಕೇಸ್‌ಗೆ ಸಂಬಂಧಿಸಿದಂತೆ ನಟ ದರ್ಶನ್ ಅವರ ವಿರುದ್ದ ದೂರು ದಾಝಲಾಗಿತ್ತು. ಅ.28ರಂದು ಆರ್ ಆರ್ ನಗರದ ನಟ ದರ್ಶನ್ ನಿವಾಸದ ಪಕ್ಕದ ಖಾಲಿ ಜಾಗದಲ್ಲಿ ಎರಡು ನಾಯಿಗಳು ಕಚ್ಚಿ ಗಾಯಗೊಳಿಸಿದ್ದವು ಎಂದು ಬಿಇಎಂಲ್ 5ನೇ ಹಂತದ ನಿವಾಸಿ ಅಮಿತಾ ಜಿಂದಾಲ್ ಪೊಲೀಸರಿಗೆ ದೂರು ನೀಡಿದ್ದರು. ಈ ನಿಟ್ಟಿನಲ್ಲಿ ನಾಯಿಗಳ ಮಾಲೀಕರು ಎನ್ನಲಾದ ದರ್ಶನ್ ಅವರನ್ನು ಕೇಸ್‌ನ 2ನೇ ಆರೋಪಿಯನ್ನಾಗಿ ಪರಿಗಣಿಸಿ ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸರು ತನಿಖೆ ನಡೆಸಿದ್ದರು, ಈ ನಡುವೆ ನ್ಯಾಯಲಕ್ಕೆ ಪೊಲೀಸರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ.
ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಚಾರ್ಚ್ ಶೀಟ್ ಸಲ್ಲಿಸಿದ್ದಾರೆ ಅಂತ ತಿಳಿದು ಬಂದಿದೆ. ವೇಳೇ ಸರಿ ಸುಮಾರು 150 ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿದ್ದು, ಈ ವೇಳೇ ಆರೋಪ ಪಟ್ಟಿಯಲ್ಲಿ ದರ್ಶನ್ ಅವರ ಹೆಸರನ್ನು ಉಲ್ಲೇಖ ಮಾಡಲಾಗಿಲ್ಲ ಎನ್ನಲಾಗಿದೆ. ಘಟನೆಗೂ, ನಟ ದರ್ಶನಗೂ ಯಾವುದೇ ಸಂಬಂಧವಿಲ್ಲ ಅಂತ ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.