ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ ಅಂತ ಬಿಬಿಎಂಪಿ ಸ್ಪಷ್ಟ ಪಡಿಸಿದೆ. ಈ ಮೂಲಕ ಬೆಂಗಳೂರು ಜನತೆಗೆ ಬಿಗ್ ರಿಲೀಫ್ ನೀಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು ಸ್ಪಷ್ಟೀಕರಿಸಿದೆ.
ಮುಂದುವರೆದು, ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ವಿಚಾರವಾಗಿ ಯಾವುದೇ ಪ್ರಸ್ತಾವನೆ ಇರುವುದಿಲ್ಲ. ಈ ರೀತಿಯ ಊಹಾಪೋಹಗಳಿಗೆ ಯಾರೂ ಕಿವಿಗೊಡಬಾರದೆಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ರವರು ನಾಗರೀಕರಲ್ಲಿ ಮನವಿ ಮಾಡಿರುತ್ತಾರೆ.

ಉದ್ಯೋಗ ವಾರ್ತೆ: ಗುತ್ತಿಗೆ ಆಧಾರದಲ್ಲಿ ವಿವಿಧ ವೈದ್ಯಕೀಯ ಹುದ್ದೆಗಳಿಗಾಗಿ ನೇರ ಸಂದರ್ಶನಕ್ಕೆ ಕರೆ | Job Alert







