ಬೆಂಗಳೂರು: ನಗರದಲ್ಲಿ ನೀರಿನ ಬಿಕ್ಕಟ್ಟು ಹೆಚ್ಚಾಗಿದೆ. ನೀರು ಅತ್ಯಮೂಲ್ಯ. ಮಿತವಾಗಿ ಬಳಸಿ ಎಂಬುದಾಗಿ ರಾಜ್ಯ ಸರ್ಕಾರ ಜನತೆಗೆ ತಿಳಿಸಿ ಹೇಳಿದೆ. ಅಲ್ಲದೇ ಅನ್ಯಕಾರ್ಯಗಳಿಗೆ ನೀರು ಬಳಕೆ ಮಾಡಿದ್ರೇ 5,000 ದಂಡ ವಿಧಿಸೋದಾಗಿ ಆದೇಶಿಸಿತ್ತು. ಆದ್ರೇ ಮಾ.15ರಿಂದ ಅನ್ಯ ಉದ್ದೇಶಕ್ಕೆ ನೀರು ಬಳಸಿದ್ರೇ ದಂಡ ವಿಧಿಸಲಾಗುತ್ತದೆ ಎಂಬುದಾಗಿ ಜಲಮಂಡಳಿ ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕಾವೇರಿ ನೀರನ್ನು ಕುಡಿಯುವ ಉದ್ದೇಶ ಹೊರತುಪಡಿಸಿ ಅನ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಿ ಈಗಾಗಲೇ ಜಲಮಂಡಳಿಯ ಕಾಯ್ದೆ ಅಡಿ ಆದೇಶ ಹೊರಡಿಸಲಾಗಿದ್ದು, ಜನರು ಸಹ ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಅವರು ಮಾ.15ರಿಂದ ಇದನ್ನು ಅನುಷ್ಠಾನಗೊಳಿಸಲಾಗುವುದು ಎಂದರು.
ಅನ್ಯ ಉದ್ದೇಶಕ್ಕೆ ಬಳಸುವುದು ಕಂಡುಬಂದಲ್ಲಿ ನಮ್ಮ ಮಂಡಳಿ ಸಿಬ್ಬಂದಿ ಸ್ಥಳದಲ್ಲಿಯೇ ಆದೇಶದ ಅನುಸಾರ ದಂಡ ವಿಧಿಸಲಿದ್ದಾರೆ. ಈ ಕುರಿತು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ಅಪಾರ್ಟ್‍ಮೆಂಟ್ ನಿವಾಸಿಗಳಿಗೆ ನೀರು ಬಳಕೆ ಕುರಿತು ಗೈಡ್ ಲೈನ್ಸ್ ಗಳನ್ನು ಸಂಬಂಧಿಸಿದವರೊಂದಿಗೆ ಕುಳಿತು ಚರ್ಚಿಸಿ ಹೊರಡಿಸಲಾಗುವುದು ಎಂದರು.
BREAKING: ಮಾ.15ರವರೆಗೆ ಬೆಂಗಳೂರಲ್ಲಿ ‘ಟ್ಯಾಂಕ್ ನೋಂದಣೆ’ಗೆ ಅವಧಿ ವಿಸ್ತರಣೆ- BWSSB ಆದೇಶ