ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ರಾಘವೇಂದ್ರ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ವಿವಿಧ ಮುಖಂಡರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ದೂರಿನಡಿ ದಾಖಲಾಗಿದ್ದಂತ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್ ನೀಡಿದೆ.
ಇಂದು ಬಿಜೆಪಿ ಮುಖಂಡ ನಳೀನ್ ಕುಮಾರ್ ಕಟೀಲ್ ಅವರು ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ದೂರಿನ ನಂತ್ರ ದಾಖಲಾಗಿದ್ದಂತ ಎಫ್ಐಆರ್ ರದ್ದುಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸಿತು.
ಹೈಕೋರ್ಟ್ ನ್ಯಾಯಪೀಠವು ಚುನಾವಣಾ ಬಾಂಡ್ ಹೆಸರಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ರಾಘವೇಂದ್ರ, ನಳೀನ್ ಕುಮಾರ್ ಕಟೀಲ್ ಸೇರಿದಂತೆ ವಿವಿಧ ಮುಖಂಡರ ಮೇಲೆ ದಾಖಲಾಗಿದ್ದಂತ ಎಫ್ಐಆರ್ ಗೆ ಮಧ್ಯಂತರ ತಡೆಯಾಜ್ಞೆೆ ನೀಡಿ ಆದೇಶಿಸಿದೆ.
BREAKING: ‘ಸರ್ಕಾರಿ ನೌಕರ’ರಿಗೆ ಮತ್ತೊಂದು ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಮುಂಬಡ್ತಿ’ ಕುರಿತು ಮಹತ್ವದ ಆದೇಶ
BREAKING : ತಿರುಪತಿ ಲಡ್ಡು ವಿವಾದ : ವಿಚಾರಣೆಯನ್ನು ಅ.3ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್! | Tirupati Laddu Row