ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಹಿಂದೆ ಸಿಎಂ ಆಗಿದ್ದಂತ ಸಂದರ್ಭದಲ್ಲಿ ಟರ್ಫ್ ಕ್ಲಬ್ ಸ್ಟೀವರ್ಡ್ ಹುದ್ದೆಗೆ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬುದಾಗಿ ದಾಖಲಾಗಿದ್ದಂತ ಖಾಸಗಿ ದೂರಿನ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ಬಿ ರಿಪೋರ್ಟ್ ಅನ್ನು ಕೋರ್ಟ್ ಅಂಗೀಕರಿಸಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ ನೀಡಿದೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಟರ್ಫ್ ಕ್ಲಬ್ ಸ್ಟೀವರ್ಡ್ ಹುದ್ದೆಗೆ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬುದಾಗಿ ಬಿಜೆಪಿಯ ಎನ್ ಆರ್ ರಮೇಶ್ ಕೋರ್ಟ್ ಗೆ ಖಾಸಗಿ ದೂರು ಸಲ್ಲಿಸಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದಂತ ಲೋಕಾಯುಕ್ತ ಪೊಲೀಸರು, ಸಿಎಂ ಸಿದ್ಧರಾಮಯ್ಯ ಅವರು ಕಿಕ್ ಬ್ಯಾಕ್ ಪಡೆದಿಲ್ಲ ಎಂಬುದಾಗಿ ಬಿ ರಿಪೋರ್ಟ್ ಸಲ್ಲಿಸಿದ್ದರು.
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಲೋಕಾಯುಕ್ತ ಪೊಲೀಸರು ಸಲ್ಲಿಸಿರುವಂತ ಬಿ ರಿಪೋರ್ಟ್ ಅಂಗೀಕರಿಸಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ವಿರುದ್ಧದ ಕಿಕ್ ಬ್ಯಾಕ್ ಕೇಸಲ್ಲಿ ಬಿಗ್ ರಿಲೀಫ್ ನೀಡಿದೆ.
‘BPL, APL ಕಾರ್ಡ್’ದಾರರೇ ಗಮನಿಸಿ: ಜ.31 ‘e-KYC’ಗೆ ಲಾಸ್ಟ್ ಡೇಟ್, ಮಾಡಿಸದಿದ್ರೆ ಬರಲ್ಲ ರೇಷನ್
ರಾಜ್ಯದ ‘ದ್ವಿತೀಯ PUC ವಿದ್ಯಾರ್ಥಿ’ಗಳ ಗಮನಕ್ಕೆ: ‘ಅಂಕಪಟ್ಟಿ’ಯಲ್ಲಿನ ‘ತಪ್ಪು ತಿದ್ದುಪಡಿ’ಗೆ ಅವಕಾಶ