ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ನಿವೇಶನ ಹಗರಣದಲ್ಲಿ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದಂತ ಬಿ-ರಿಪೋರ್ಟ್ ಅನ್ನು ಕೋರ್ಟ್ ಪುರಸ್ಕರಿಸಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಇತರರಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಅವರಿಗೆ ಬಿಗ್ ರಿಲೀಫ್ ನೀಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದಂತ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯವು ಪುರಸ್ಕರಿಸಿದೆ.
ಇನ್ನೂ ಉಳಿದವರ ಮೇಲಿನ ತನಿಖೆ ಮುಂದುವರೆಸಲು ಕೋರ್ಟ್ ಆದೇಶಿಸಿದೆ. ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ, ಬಾಮೈದ, ಜಮೀನು ಮಾಲೀಕರಿಗೂ ಜನಪ್ರತಿನಿಧಿಗಳ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂಮಾಲೀಕ ದೇವರಾಜಗೆ ನ್ಯಾಯಾಲಯದಿಂದ ರಿಲೀಫ್ ನೀಡಲಾಗಿದೆ. ಈ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದರು. ಈ ಬಿ-ರಿಪೋರ್ಟ್ ಪುರಸ್ಕರಿಸಿರುವಂತ ಕೋರ್ಟ್, ಉಳಿದವರ ಮೇಲಿನ ತನಿಖೆ ಮುಂದುವರೆಸಲು ಆದೇಶಿಸಿದೆ.
ಒಟ್ಟಾರೆಯಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮುಡಾ ಹಗರಣದಲ್ಲಿ ಕೋರ್ಟ್ ಬಿ ರಿಪೋರ್ಟ್ ಒಪ್ಪಿಕೊಳ್ಳುವ ಮೂಲಕ ಕಳಂಕದಿಂದ ಮುಕ್ತರನ್ನಾಗಿ ಮಾಡಿದೆ. ಆ ಮೂಲಕ ಮತ್ತೆ ಕಳಂಕ ರಹಿತ ಸಿಎಂ ಸಿದ್ಧರಾಮಯ್ಯ ಪಟ್ಟಕ್ಕೆ ಏರಿದಂತೆ ಆಗಿದೆ.








