ಬೆಂಗಳೂರು: ಅಪಾರ್ಮೆಂಟ್ ನಿವಾಸಿಗಳಿಗೆ ಆಮಿಷ ಒಡ್ಡಿದ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಬಲವಂತವಾಗಿ ಕ್ರಮ ಕೈಗೊಳ್ಳದಂತೆ ಸೂಚಿಸಿದೆ. ಈ ಮೂಲಕ ತಾತ್ಕಾಲಿಕ ರಿಲೀಫ್ ಅನ್ನು ಹೈಕೋರ್ಟ್ ನೀಡಿದೆ.
ಅಪಾರ್ಮೆಂಟ್ ನಿವಾಸಿಗಳಿಗೆ ಆಮಿಷವೊಡ್ಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನ್ಯಾಯಪೀಠದ ಮುಂದೆ ಚುನಾವಣಾ ಭಾಷಣವನ್ನು ಆಮಿಷ ಎಂಬುದಾಗಿ ಆರೋಪಿಸಲಾಗಿದೆ ಎಂಬುದಾಗಿ ಡಿಕೆಶಿ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದಿಸಿದರು.
ಆದ್ರೇ ಚುನಾವಣಾ ಆಯೋಗದ ಪರ ವಕೀಲರು ಇದಕ್ಕೆ ಆಕ್ಷೇಪಿಸಿ, ಡಿ.ಕೆ ಶಿವಕುಮಾರ್ ಅಪಾರ್ಮೆಂಟ್ ನಿವಾಸಿಗಳಿಗೆ ಆಮಿಷ ಒಡ್ಡಿದ್ದಾರೆ ಎಂಬುದಾಗಿ ವಾದಿಸಿದರು. ಮತದಾರರಿಗೆ ಡಿಸಿಎಂ ಡಿಕೆ ಶಿವಕುಮಾರ್ ಆಮಿಷ ಒಟ್ಟಿದ್ದಾರೆ ಎಂದರು.
ಈ ವಾದ ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ಅಪಾರ್ಮಂಟ್ ನಿವಾಸಿಗಳಿಗೆ ಆಮಿಷ ಪ್ರಕರಣದಲ್ಲಿ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಲಾಗಿದೆ.
‘ಪಿತ್ರೊಡಾ ಹೇಳಿಕೆ’ಗೂ ‘ಕಾಂಗ್ರೆಸ್ ಪಕ್ಷ’ಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ