ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 17 ರ ಬೆಳಿಗ್ಗೆ 10.30 ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಘನ ಉಪಸ್ಥಿತಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೆರವೇರಿಸುವರು. ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಕ್ಷೇತ್ರದ ವಿಧಾನಸಭಾ ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸುವರು. ವಿಶೇಷ ಆಹ್ವಾನಿತರಾಗಿ ಭದ್ರಾವತಿ ಕ್ಷೇತ್ರ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ. ಸಂಗಮೇಶ್ವರ ಹಾಗೂ ಸಾಗರ ಕ್ಷೇತ್ರದ ಶಾಸಕರು ಹಾಗೂ ಕನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಇವರುಗಳು ಪಾಲ್ಗೊಳ್ಳುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ/ವಿಧಾನಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ವಿವಿಧ ನಿಗಮ/ಮಂಡಳಿ/ ಪ್ರಾಧಿಕಾರಗಳ ಅಧ್ಯಕ್ಷರು/ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲೆಯ ಗಣ್ಯರು, ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಸಹ್ಯಾದ್ರಿ ಕಲಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಮೋಹನ ಚಂದ್ರಗುತ್ತಿರವರಿಂದ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿದೆ.
ಅಂದು ಬೆಳಗ್ಗೆ 9.00ಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆಯನ್ನು ವಿವಿಧ ಜನಪದ ತಂಡಗಳೊಂದಿಗೆ ನಗರದ ಸೈನ್ಸ್ ಮೈದಾನದಿಂದ ಕುವೆಂಪು ರಂಗಮಂದಿರದವರೆಗೆ ಆಯೋಜಿಸಲಾಗಿದೆ.
ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆಯ ವಿಚಾರ : ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್