ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವಂತ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದೆ.
ಇಂದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಕೇಸನ್ನು ಸಿಬಿಐ ತನಿಖೆಗೆ ವಹಿಸುವಂತೆ ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ನಡೆಸಿತು.
ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸಲು ನಕಾರ ವ್ಯಕ್ತ ಪಡಸಿದಂತ ನ್ಯಾಯಪೀಠವು, ಯೂನಿಯನ್ ಬ್ಯಾಂಕ್ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ವಜಾಗೊಳಿಸಿತು. ಈ ಮೂಲಕ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ನೀಡಿದೆ.
BREAKING : ಮರಕುಂಬಿ ದಲಿತ ದೌರ್ಜನ್ಯ ಕೇಸ್: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಹೈಕೋರ್ಟ್ ಜಾಮೀನು!
BREAKING: ಮುಡಾ ಕೇಸ್ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ FIR ದಾಖಲು