ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಹತ್ಯೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಈ ಮೂಲಕ ಶಾಸಕ ಬೈರತಿ ಬಸವರಾಜ್ ಗೆ ಬಿಗ್ ರಿಲೀಫ್ ನೀಡಿದೆ.
ಇಂದು ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಅರುಣ್ ಅವರನ್ನೊಳಗೊಂಡಂತ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿ, ಈ ಆದೇಶ ಹೊರಡಿಸಿದೆ. ಅಲ್ಲದೇ ತನಿಖೆಗೂ ಸಹಕರಿಸುವಂತೆ ಶಾಸಕ ಬೈರತಿ ಬಸವರಾಜ್ ಗೆ ಸೂಚಿಸಿದೆ.
ಅಂದಹಾಗೇ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆ ನಡೆಸಲಾಗುತ್ತಿದೆ. ಪ್ರಮುಖ ಆರೋಪಿ ಜಗದೀಶ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಕೂಡ ಹೊರಡಿಸಿದೆ. ಇದೇ ಸಂದರ್ಭದಲ್ಲಿ ಶಾಸಗ ಬೈರತಿ ಬಸವರಾಜ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿ, ತಾತ್ಕಾಲಿಕವಾಗಿ ರಿಲೀಫ್ ನೀಡಿದೆ.
ರಾಜ್ಯದ ಜನತೆ ಗಮನಕ್ಕೆ: ಆ.16ರಿಂದ ಸಾರ್ವಜನಿಕರಿಗೆ ‘ರಾಜಭವನ’ ವೀಕ್ಷಣೆಗೆ ಅವಕಾಶ
64,197 ರೈಲ್ವೆ ಹುದ್ದೆಗಳಿಗೆ 1.87 ಕೋಟಿ ಅರ್ಜಿಗಳು ಸಲ್ಲಿಕೆ: ರೈಲ್ವೆ ಸಚಿವಾಲಯದ ಅಂಕಿ ಅಂಶಗಳು